ಮಠ-ಮಾನ್ಯಗಳು ಮಾನವೀಯ ಮೌಲ್ಯಗಳ ಮಹತ್ವ ಸಾರುತ್ತಿವೆ: ಚನ್ನ ಬಸವ ಶಿವಯೋಗಿ ಸ್ವಾಮೀಜಿ

KannadaprabhaNewsNetwork |  
Published : Oct 10, 2026, 02:15 AM IST
ಹೂವಿನಹಡಗಲಿಯ ಹಿರೇಮಲ್ಲನಕೆರೆ ಮಠದಲ್ಲಿ ಆಯೋಜಿಸಿದ್ದ ಹಾನಗಲ್ಲ ಕುಮಾರ ಶಿವಯೋಗಿಗಳ 159ನೇ ಜಯಂತ್ಯೋತ್ಸವಕ್ಕೆ ನೀಲಗುಂದ ಮಠದ ಚನ್ನಬಸವ ಶಿವಯೋಗಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ರಾಜ್ಯದ ಮಠ-ಮಾನ್ಯಗಳು ಕೇವಲ ಧಾರ್ಮಿಕ ಆಚರಣೆಗೆ ಅಷ್ಟೇ ಮೀಸಲು ಆಗಿಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಮಹತ್ವ ಸಾಗುವ ಜತೆಗೆ, ಶಿಕ್ಷಣ, ಸಾಮಾಜಿಕ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿವೆ.

ಹಾನಗಲ್ಲ ಕುಮಾರ ಶಿವಯೋಗಿಗಳ 159ನೇ ಜಯಂತಿ

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ

ರಾಜ್ಯದ ಮಠ-ಮಾನ್ಯಗಳು ಕೇವಲ ಧಾರ್ಮಿಕ ಆಚರಣೆಗೆ ಅಷ್ಟೇ ಮೀಸಲು ಆಗಿಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಮಹತ್ವ ಸಾಗುವ ಜತೆಗೆ, ಶಿಕ್ಷಣ, ಸಾಮಾಜಿಕ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ನೀಲಗುಂದ ಗುಡ್ಡದ ಸಂಸ್ಥಾನದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ಹೇಳಿದರು.

ಪಟ್ಟಣದ ಹಿರೇಮಲ್ಲನಕೆರೆ ಮಠದಲ್ಲಿ ಆಯೋಜಿಸಿದ್ದ ಹಾನಗಲ್ಲ ಕುಮಾರ ಶಿವಯೋಗಿಗಳ 159ನೇ ಜಯಂತಿ ಮತ್ತು ಲಿಂ. ಚನ್ನಬಸವ ಸ್ವಾಮೀಜಿ ಅವರ 39ನೇ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರ ಮಾಡುವ ಕೆಲಸಗಳನ್ನು ವೀರಶೈವ ಮಠಗಳು ನಾಡಿನಲ್ಲಿ, ಅನ್ನ, ಅಕ್ಷರ ದಾಸೋಹದ ಮೂಲಕ ಸಮಾಜದಲ್ಲಿ ಶಿಕ್ಷಣದ ಬಹುದೊಡ್ಡ ಕ್ರಾಂತಿ ಮಾಡಿವೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣದ ಬೆಳಕನ್ನು ನೀಡುತ್ತಿವೆ. ಮಠಗಳು ಸಂಸ್ಕೃತ ಪಾಠಶಾಲೆಗಳಾಗಿ ಉಳಿಯದೇ, ಸಮಾಜದಲ್ಲಿನ ಅಸಮಾನತೆ, ಜಾತಿ ವ್ಯವಸ್ಥೆ, ಅಜ್ಞಾನ, ಮೂಢನಂಬಿಕೆ ಸೇರಿದಂತೆ, ಸಮಾಜವನ್ನು ಸರಿದಾರಿಗೆ ತರುವ ಕೆಲಸದಲ್ಲಿ ತೊಡಗಿವೆ. ಶಿಕ್ಷಣದಿಂದ ಸಮಾನತೆ, ಸಹಬಾಳ್ವೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತುವಂತಹ ಕೆಲಸ ಮಾಡುತ್ತಿವೆ ಎಂದರು.

ಹಿಂದಿನ ಕಾಲದಲ್ಲಿ ಶಿಕ್ಷಣವು ಕೆಲವೇ ವರ್ಗಗಳಿಗೆ ಸೀಮಿತವಾಗಿತ್ತು, ಆ ಸಂದರ್ಭದಲ್ಲಿ ಮಠಗಳು ಜಾತಿ, ಧರ್ಮ, ಬಡವ-ಬಲ್ಲಿದ ಎಂಬ ಭೇದ ಮರೆತು ಜ್ಞಾನಾರ್ಜನೆಗೆ ಅವಕಾಶ ಕಲ್ಪಿಸುವ ಪ್ರಯತ್ನ ಮಾಡಿವೆ ಎಂದು ಹೇಳಿದರು.

ಉತ್ತಂಗಿಯ ಸೋಮಶಂಕರ ಸ್ವಾಮೀಜಿ, ಜಂಗಮ ಕ್ಷೇತ್ರ ಲಿಂಗನಾಯಕನಹಳ್ಳಿಯ ಚನ್ನವೀರ ಸ್ವಾಮೀಜಿ, ಸೋಗಿ ಪುವರ್ಗಮಠದ ಸಿದ್ದವೀರ ಶಿವಾಚಾರ್ಯ ಸ್ವಾಮೀಜಿ, ಹಿರೇಮಲ್ಲಕೆರೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಹೊಳಲಿನ ಮಲ್ಲಿಕಾರ್ಜುನ ದೇವರು, ಕೋಡಿಹಳ್ಳಿ ಮುದುಕಪ್ಪ, ಅಟವಾಳಗಿ ಕೊಟ್ರೇಶ್, ಪಿ.ಟಿ. ಭರತ್ ಸೇರಿದಂತೆ ಇತರರಿದ್ದರು.

ಇದಕ್ಕೂ ಮುನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಕಲ ಮಂಗಳ ವಾದ್ಯಗಳೊಂದಿಗೆ ಹಾನಗಲ್ಲ ಕುಮಾರ ಶಿವಯೋಗಿಗಳ ಭಾವಚಿತ್ರ ಮೆರವಣಿಗೆಯು ಶ್ರೀ ಮಠದ ವರೆಗೂ ಸಡಗರ ಸಂಭ್ರಮದಿಂದ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡು ಕಂಡ ಅಪ್ರತಿಮ ಶಿವಯೋಗಿಗಳಲ್ಲಿ ಕುಮಾರ ಶಿವಯೋಗಿಗಳು ಒಬ್ಬರು: ಶೇಖರಯ್ಯ ಶಾಸ್ತ್ರೀಗಳು
ಬೆಣಚಮಟ್ಟಿ ಗ್ರಾಮದ ಕೆರೆಯಲ್ಲಿ ಅಕ್ರಮ ಮರಳುಗಾರಿಕೆ