ಧರ್ಮದ ವೇದಿಕೆ ಪವಿತ್ರವಾದದ್ದು. ಅದನ್ನು ವೈಯಕ್ತಿಕ ವಿಚಾರಗಳಿಗೆ, ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳಬಾರದು. ಧರ್ಮದ ವೇದಿಕೆಯ ಗೌರವ ಮತ್ತು ಪಾವಿತ್ರ್ಯ ಅರಿತು ಮಾತನಾಡಬೇಕೆಂದು ಎಂದು ಸಣ್ಣ ಕೈಗಾರಿಕೆ ಸಚಿವ ಡಾ.ವಿಜಯಾನಂದ ಕಾಶಪ್ಪನವರ ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಧರ್ಮದ ವೇದಿಕೆ ಪವಿತ್ರವಾದದ್ದು. ಅದನ್ನು ವೈಯಕ್ತಿಕ ವಿಚಾರಗಳಿಗೆ, ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳಬಾರದು. ಧರ್ಮದ ವೇದಿಕೆಯ ಗೌರವ ಮತ್ತು ಪಾವಿತ್ರ್ಯ ಅರಿತು ಮಾತನಾಡಬೇಕೆಂದು ಎಂದು ಸಣ್ಣ ಕೈಗಾರಿಕೆ ಸಚಿವ ಡಾ.ವಿಜಯಾನಂದ ಕಾಶಪ್ಪನವರ ಹೇಳಿದರು.ಕಡಪಟ್ಟಿ ದೇವಸ್ಥಾನ ಆವರಣದಲ್ಲಿ ಸೋಮವಾರ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನದಲ್ಲಿ ಜಗದ್ಗುರು ರಂಭಾಪುರಿ ಪೀಠದ ಮುಖವಾಣಿ ರಂಭಾಪುರಿ ಬೆಳಗು ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಪ್ರಯತ್ನ ನಡೆಯಬಾರದು. ವೀರಶೈವ ಲಿಂಗಾಯತ ಧರ್ಮವನ್ನು ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಸಬೇಕು. ಧರ್ಮದ ಏಕತೆ, ಸಾಮರಸ್ಯ ಬಲಪಡಿಸುವ ಕೆಲಸಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶ ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರಗಳ ನೆಲವಾಗಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ವಚನಗಳ ಮೂಲಕ ಸರಳ ಜೀವನ, ಸಮಾನತೆ, ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳಲ್ಲಿ ಅಂತಹ ಮೌಲ್ಯಗಳಿವೆ. ಅಧಿಕಾರ ಶಾಶ್ವತವಲ್ಲ ಅಧಿಕಾರ ಬರುತ್ತೇ ಹೋಗುತ್ತೇ, ಆದರೆ ವ್ಯಕ್ತಿಯ ನಡೆ-ನುಡಿ, ಪ್ರಾಮಾಣಿಕತೆ ಮತ್ತು ಮೌಲ್ಯಗಳು ಶಾಶ್ವತವಾಗಿ ಉಳಿಯುತ್ತವೆ. ಧಾರ್ಮಿಕ ವೇದಿಕೆಗಳಲ್ಲಿ ಮಾತನಾಡುವಾಗ ಅದರ ಘನತೆ ಮತ್ತು ಪಾವಿತ್ರ್ಯವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಜಗದೀಶ ಗುಡಗುಂಟಿ, ಶಾಸಕ ಸಿದ್ದು ಸವದಿ, ಅ.ಭಾ.ವೀ.ಮಹಾಸಭಾ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಿದ್ದು ಕೊಣ್ಣೂರ ಸೇರಿದಂತೆ ರಾಜಕೀಯ ಧುರೀಣರು ಮತ್ತು ನಾಡಿನ ಶಿವಾಚಾರ್ಯರ ಸಹಿತ ಹಲವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.