ಶ್ರೀ ತಿರುಮಲ ವೆಂಕಟರಮಣ ದೇವರ ಪುನರ್ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ದೇವರ ಪಾಲಕಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಜ.೨೨ರಿಂದ ೨೬ರ ವರೆಗೆ ವಿಜೃಂಭಣೆಯಿಂದ ನೆರವೇರಲಿವೆ.
ಜ.24 ರಂದು ಶ್ರೀನಿವಾಸ ಕಲ್ಯಾಣೋತ್ಸವ, 25 ರಂದು ಪಾಲಕಿ ಉತ್ಸವ
ಕನ್ನಡಪ್ರಭ ವಾರ್ತೆ ಭಟ್ಕಳಇಲ್ಲಿನ ನಾಮಧಾರಿ ಸಮಾಜದ ಗುರುಮಠ ಮತ್ತು ಕುಲದೇವರಾದ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವರ ಪುನರ್ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ದೇವರ ಪಾಲಕಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಜ.೨೨ರಿಂದ ೨೬ರ ವರೆಗೆ ವಿಜೃಂಭಣೆಯಿಂದ ನೆರವೇರಲಿವೆ.ನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನ ಸ್ಥಳೀಯವಾಗಿ ಮಿನಿ ತಿರುಪತಿ ಎಂಬ ನಂಬಿಕೆ, ಭಕ್ತಿ ಭಾವನೆ ಸಮುದಾಯದವರಲ್ಲಿದೆ. ವರ್ಷಂಪ್ರತಿಯ ವರ್ಧಂತ್ಯುತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದು, ವರ್ಷದಿಂದ ವರ್ಷಕ್ಕೆ ತಿರುಮಲ ವೆಂಕಟ್ರಮಣ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದ್ದು, ಆಗಮಿಸುವ ಭಕ್ತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿರುವುದು ವಿಶೇಷ. ವರ್ಧಂತ್ಯುತ್ಸವದ ಪ್ರಯುಕ್ತ ಜ.೨೨ ಮತ್ತು ೨೩ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಜ೨೪ರಂದು ಬೆಳಗ್ಗೆ ೮.೩೦ಕ್ಕೆ ಶ್ರೀನಿವಾಸ ಕಲ್ಯಾಣೋತ್ಸವ, ಮಧ್ಯಾಹ್ನ ೧೨ ಗಂಟೆಗೆ ಸಭಾ ಕಾರ್ಯಕ್ರಮ, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್.ವೈದ್ಯರಿಗೆ ಸನ್ಮಾನ, ಶ್ರೀಗಳಿಂದ ಆಶೀರ್ವಚನ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ೫ ಗಂಟೆಯಿಂದ ಹರಿನಾಮಸ್ಮರಣೆ ಕುಣಿತ( ಹೌದರಾಯನ ಕುಣಿತ), ಸಂಜೆ ೭ ಗಂಟೆಗೆ ಗದ್ದುಗೆಯ ಶ್ರೀ ಪದ್ಮಾವತಿ ಅಮ್ಮನವರ ಪಾಲಕಿ ಆಗಮಿಸಲಿದೆ. ಜ. ೨೫ರಂದು ಬೆಳಿಗ್ಗೆ ಗಣಪತಿ ಪೂಜೆ, ಗಣಹೋಮ, ದೇವರಿಗೆ ತುಲಾಭಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಬೆಳಗ್ಗೆ ೧೦.೩೦ಕ್ಕೆ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ಶ್ರೀಗಳಿಂದ ಆಶೀರ್ವಚನ, ಮಂತ್ರಾಕ್ಷತೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ೧೨.೩೦ಕ್ಕೆ ಮಹಾಮಂಗಳಾರತಿ, ೧ ಗಂಟೆಯಿಂದ ಮಹಾ ಅನ್ನಸಂತರ್ಪಣೆ, ಸಂಜೆ ೩.೩೦ರಿಂದ ಶ್ರೀದೇವರ ಪಾಲಕಿ ಮಹೋತ್ಸವ, ರಾತ್ರಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ಜ.೨೬ರಂದು ೮.೩೦ಗಂಟೆಗೆ ಓಕಳಿ ಸೇವೆ, ೧೧ ಗಂಟೆಗೆ ಫಲಾವಳಿ ಏಲಂ, ಸಂಜೆ ೭ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾತ್ರಿ ೯.೩೦ ಗಂಟೆ ವಾಚಮ್ಯಾನ್ ನಾಟಕ ನಡೆಯಲಿದೆ ಎಂದು ಗುರುಮಠ ಮತ್ತು ನಾಮಧಾರಿ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೃಷ್ಣಾ ನಾಯ್ಕ, ಅಧ್ಯಕ್ಷ ಅರುಣ ನಾಯ್ಕ, ಉಪಾಧ್ಯಕ್ಷ ಎಂ ಕೆ ನಾಯ್ಕ, ಪ್ರಧಾನ ಕಾರ್ಯದರ್ಶಿ ಡಿ ಎಲ್ ನಾಯ್ಕ ಸೇರಿದಂತೆ ಸಮಿತಿಯ ಸದಸ್ಯರು ಕೋರಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.