ಕನ್ನಡಪ್ರಭ ವಾರ್ತೆ ಮದ್ದೂರು
ಅಂದು ಬೆಳಗ್ಗೆ 7 ಗಂಟೆಗೆ ಮಹಾಗಣಪತಿ ಪೂಜೆ, ಪುಣ್ಯಹ, ಪ್ರಧಾನ ಸುಬ್ರಹ್ಮಣ್ಯ ಸ್ವಾಮಿ ಹೋಮ, ದೇವರಿಗೆ ವಿಶೇಷ ಅಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಲಾಗಿದೆ ಎಂದು ತಿಳಿಸಿದ್ದಾರೆ.
ದೇಗುಲಕ್ಕೆ ಆಗಮಿಸುವ ಸಹಸ್ರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಷಷ್ಠ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾತ್ತಿದೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಅಸಂಖ್ಯಾತ ಭಕ್ತಾದಿಗಳು ಆಗಮಿಸಿ ಆಗಮಿಸಿ ದೇವರ ಕೃಪೆಗೆ ಒಳಗಾಗಬೇಕೆಂದು ಮನವಿ ಮಾಡಿದ್ದಾರೆ.23ರಂದು ಹನುಮಂತರಾಯಸ್ವಾಮಿ ಬ್ರಹ್ಮ ರಥೋತ್ಸವ
ತಾಲೂಕಿನ ಹರಿಹರಪುರ- ಕುರ್‍ನೇನಹಳ್ಳಿ ಗ್ರಾಮದ ಶ್ರೀಹನುಮಂತರಾಯಸ್ವಾಮಿ ಗ್ರಾಮಭಿವೃದ್ಧಿ ಸಂಘದ ನೇತೃತ್ವದಲ್ಲಿ ಡಿ.23ರಂದು ಶ್ರೀಹನುಮಂತರಾಯಸ್ವಾಮಿ ಬ್ರಹ್ಮ ರಥೋತ್ಸವ ನಡೆಯಲಿದೆ.
ಗ್ರಾಮದ ಬೀದಿ ಬೀದಿಗಳಲ್ಲಿ ಹನುಮ ರಥ ಸಂಚರಿಸಲಿದೆ. ಕನ್ನೆ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಹರಿಹರಪುರ-ಕುರ್‍ನೇನಹಳ್ಳಿ ಗ್ರಾಮದ ಶ್ರೀಹನುಮಂತರಾಯಸ್ವಾಮಿ ಗ್ರಾಮಭಿವೃದ್ಧಿ ಸಂಘದ ಪ್ರಕಟಣೆ ತಿಳಿಸಿದೆ.