ಗುರುವಿನ ಸ್ಮರಣೆ ಇರಲಿ

KannadaprabhaNewsNetwork |  
Published : Sep 06, 2026, 02:45 AM IST
ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಹಿಂದೆ ಗುರುಕುಲ ಪದ್ದತಿಯಲ್ಲಿ ಗುರುಗಳ ಬಗ್ಗೆ ಅಪಾರವಾದ ಗೌರವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅದು ನಶಿಸುತ್ತಿದೆ. ಶಿಕ್ಷಕ ವೃತ್ತಿಯಲ್ಲಿ ತ್ಯಾಗ ಮತ್ತು ಸೇವಾ ಮನೋಭಾವ ತೋರಿದರೆ ಮಾತ್ರ ಗೌರವ ಸಿಗುತ್ತದೆ.

ಮುಂಡಗೋಡ:

ಗುರುವಿನ ಮಾರ್ಗದರ್ಶನವಿದ್ದರೆ ಮಾತ್ರ ಗುರಿ ತಲುಪಲು ಸಾದ್ಯ. ಹಾಗಾಗಿ ಮಾರ್ಗದರ್ಶನ ಮಾಡಿದವರನ್ನು ನೆನೆಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮಾಜಿ ಶಾಸಕ ವಿ.ಎಸ್ ಪಾಟೀಲ ಹೇಳಿದರು.

ಶನಿವಾರ ಪಟ್ಟಣದ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಹಿಂದೆ ಗುರುಕುಲ ಪದ್ದತಿಯಲ್ಲಿ ಗುರುಗಳ ಬಗ್ಗೆ ಅಪಾರವಾದ ಗೌರವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅದು ನಶಿಸುತ್ತಿದೆ. ಶಿಕ್ಷಕ ವೃತ್ತಿಯಲ್ಲಿ ತ್ಯಾಗ ಮತ್ತು ಸೇವಾ ಮನೋಭಾವ ತೋರಿದರೆ ಮಾತ್ರ ಗೌರವ ಸಿಗುತ್ತದೆ. ಸರ್ಕಾರ ಶಿಕ್ಷಣ ಹಾಗೂ ಶಿಕ್ಷಕರಿಗೆ ಎಲ್ಲ ರೀತಿಯ ಸವಲತ್ತು ನೀಡುತ್ತಿದೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ಟಿ.ವೈ ದಾಸನಕೊಪ್ಪ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗುರುಗಳನ್ನು ದೇವರಿಗೆ ಹೋಲಿಸಲಾಗುತ್ತದೆ. ಗೃಹಗಳಲ್ಲಿ ಕೂಡ ಗುರು ಗೃಹ ಉನ್ನತ ಸ್ಥಾನದಲ್ಲಿದೆ. ಶಿಕ್ಷಕರ ವೃತ್ತಿ ಶ್ರೇಷ್ಟವಾಗಿದ್ದು, ಶಿಕ್ಷಕ ವೃತ್ತಿ ಸಿಗುವುದು ಒಂದು ಅದೃಷ್ಟ ಎಂದರು.

ಮಾಜಿ ಜಿ.ಪಂ ಉಪಾಧ್ಯಕ್ಷ ಎಲ್.ಟಿ ಪಾಟೀಲ ಮಾತನಾಡಿ, ವಿದ್ಯಾರ್ಥಿಯ ವಿದ್ಯೆಯ ದಾಹ ತೀರಿಸಿದವರೇ ನಿಜವಾದ ಶಿಕ್ಷಕರು. ಗುರುಗಳ ಸರಿಯಾದ ಮಾರ್ಗದರ್ಶನದಿಂದ ಏನು ಬೇಕಾದರೂ ಸಾದನೆ ಮಾಡಬಹುದು. ಶಿಕ್ಷಕರು ಕೇವಲ ಪಾಠ ಮಾಡುವುದು ಮಾತ್ರವಲ್ಲ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ರೀತಿ ಸೇವೆ ಸಲ್ಲಿಸಬೇಕು. ಮಕ್ಕಳನ್ನು ದುಷ್ಚಟಗಳಿಂದ ದೂರ ಉಳಿಯುವಂತೆ ಮಾರ್ಗದರ್ಶನ ನೀಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ ಪ್ರಾಸ್ಥಾವಿಕ ಮಾತನಾಡಿದರು. ತಹಸೀಲ್ದಾರ ಎಸ್.ಎ ಪ್ರಸಾದ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಕೆ ಕರುವಿನಕೊಪ್ಪ, ಸರಕಾರಿ ನೌಕರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಭಾಸ ಡೋರಿ, ತಾಲೂಕು ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ, ಎಸ್.ಡಿ ಮೆಡೆಣ್ಣವರ, ಹನ್ಮಂತ ತಳವಾರ, ಕೆ.ಎಸ್ ಕಾಂತೇಶ, ಎಸ್.ಸಿ ಬಸನಗೌಡರ, ಜ್ಞಾನದೇವ ಗುಡಿಯಾಳ, ರಾಮಕೃಷ್ಣ ಮೂಲಿಮನಿ ಮುಂತಾದವರು ಉಪಸ್ಥಿತರಿದ್ದರು. ಬಸವರಾಜ ಬೆಂಡ್ಲಗಟ್ಟಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನಿಸಿ ಬಿಳ್ಕೊಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅ. 22ರ ವರೆಗೆ ಮತದಾರ ಚೀಟಿ ತಿದ್ದುಪಡಿಗೆ ಅವಕಾಶ
ಬಸ್ ನಿಲ್ಲದಿದ್ದರೆ ಹೆದ್ದಾರಿ ಬಂದ್: ಗ್ರಾಮಸ್ಥರ ಎಚ್ಚರಿಕೆ