ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ-ಸ್ವಾಮೀಜಿ

KannadaprabhaNewsNetwork |  
Published : Aug 15, 2026, 03:15 AM IST
ಜಿಲ್ಲಾದ್ಯಂತ ಮೂರು ದಿನ ಸಂಚರಿಸಿದ ಸ್ವಾತಂತ್ರ್ಯ ಜ್ಯೋತಿ ರಥಯಾತ್ರೆ ಹಾವೇರಿ ನಗರದ ಹೊರವಲಯ ತೋಟದ ಯಲ್ಲಾಪುರದ ವೀರಸೌಧದಲ್ಲಿ ಸಮಾರೋಪಗೊಂಡಿತು. | Kannada Prabha

ಸಾರಾಂಶ

ಜಾತಿ, ಧರ್ಮ, ಲಿಂಗ ತಾರತಮ್ಯ ಮೀರಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರ ನಿಸ್ವಾರ್ಥ ಸೇವೆ ಹಾಗೂ ತ್ಯಾಗವನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಹಾವೇರಿ: ಜಾತಿ, ಧರ್ಮ, ಲಿಂಗ ತಾರತಮ್ಯ ಮೀರಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರ ನಿಸ್ವಾರ್ಥ ಸೇವೆ ಹಾಗೂ ತ್ಯಾಗವನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಹೊರವಲಯದ ತೋಟದ ಯಲ್ಲಾಪುರದ ವೀರಸೌಧದಲ್ಲಿ ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ ಮತ್ತು ಲಿಂ. ಷಡಕ್ಷರಪ್ಪ ರುದ್ರಪ್ಪ ಮಹಾರಾಜಪೇಟ ಪ್ರತಿಷ್ಠಾನದಿಂದ ಆಯೋಜಿಸಿದ್ದ ಮೂರು ದಿನಗಳ ಸ್ವಾತಂತ್ರ್ಯ ಜ್ಯೋತಿ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಯುವಕರು ಸಿನಿಮಾ ನಟರನ್ನು ನಾಯಕರನ್ನಾಗಿ ಪರಿಗಣಿಸುತ್ತಿರುವುದು ವಿಷಾದನೀಯ. ನಮ್ಮ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಹಾಗೂ ಸಮಾಧಿಗಳನ್ನು ರಥಯಾತ್ರೆ ಮೂಲಕ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದರು.

ಬರದೂರಿನ ಶ್ರೀ ಗುರು ರಾಮಲಿಂಗೇಶ್ವರ ಆನಂದಾಶ್ರಮದ ಡಾ. ಅಜಯಾನಂದ ಸ್ವಾಮೀಜಿ, ಶಿಕ್ಷಣ ಪ್ರೇಮಿ ನಿಜಲಿಂಗಪ್ಪ ಬಸೇಗಣ್ಣಿ, ನಿವೃತ್ತ ಶಿಕ್ಷಕ ಹನುಮಂತಗೌಡ ಗೊಲ್ಲರ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳಾ ಜೈನ್ ಮಾತನಾಡಿ, ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಶಾಲಾ-ಕಾಲೇಜುಗಳ ಮೂಲಕ ಯುವಜನರಿಗೆ ತಿಳಿಸುವ ಅಗತ್ಯವಿದೆ ಎಂದರು.

ಜಗದೀಶ ಮಹಾರಾಜಪೇಟ ಅಧ್ಯಕ್ಷತೆ ವಹಿಸಿದ್ದರು. ಶಶಿಕಲಾ ಅಕ್ಕಿ, ಭಾರತಿ ಯಾವಗಲ್ಲ, ಮಮತಾ ಮಾಗಳ, ಹನುಮಂತಸಿಂಗ್ ರಜಪೂತ, ಡಾ. ಎಸ್.ಬಿ. ಬೆನ್ನೂರ, ಪೂರ್ವಿ ಬೆನ್ನೂರ ಸ್ವಾತಂತ್ರ್ಯ ಗೀತೆಗಳನ್ನು ಪ್ರಸ್ತುತಪಡಿಸಿದರು. ಸತೀಶ ಕುಲಕರ್ಣಿ, ಪರಮೇಶ್ವರಪ್ಪ ಮೈಲಾರ, ಆವರಗೆರೆ ರುದ್ರಮುನಿ, ವೀರಣ್ಣ ಮಹಾರಾಜಪೇಟ, ಕಲ್ಲನಗೌಡ ನರೇಂದ್ರ ಉಪಸ್ಥಿತರಿದ್ದರು. ಗೂಳಪ್ಪ ಅರಳಿಕಟ್ಟಿ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರಧ್ವಜ ಕೇವಲ ಮೂರು ಬಣ್ಣಗಳ ಸಂಕೇತವಲ್ಲ. ಏಕತೆಯ ಪ್ರತೀಕ-ಸೌಮ್ಯ
ಸಂಭ್ರಮದ ಭಾರತ ಮಾತಾ ಮೆರವಣಿಗೆ