ಮಾದಕದ್ರವ್ಯ ಸೇವಿಸುವ ಮುನ್ನ ಹೆತ್ತವರ ನೆನೆಯಿರಿ

KannadaprabhaNewsNetwork |  
Published : Oct 11, 2026, 02:15 AM IST
ಪೋಟೋ 5 : ನೆಲಮಂಗಲ ಪಟ್ಟಣದ ಪವಾಡ ಬಸವಣ್ಣ ದೇವರ ಮಠದಲ್ಲಿ ಎಸ್ ಕೆಡಿಆರ್ ಪಿ ಯೋಜನೆ, ಬಿ.ಸಿ.ಟ್ರಸ್ಟ್  ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮøತಿ ಹಾಗೂ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು. | Kannada Prabha

ಸಾರಾಂಶ

ನೆಲಮಂಗಲ: ಮದ್ಯ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಒಳಗಾದವರನ್ನು ಪರಿವರ್ತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮತ್ತು ನಶೆ ಮುಕ್ತ ಸಮಾಜ ನಿರ್ಮಾಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಕಾರ್ಯನಿರ್ವಹಿಸುತ್ತಿದೆ ಎಂದು ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು

ನೆಲಮಂಗಲ: ಮದ್ಯ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಒಳಗಾದವರನ್ನು ಪರಿವರ್ತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮತ್ತು ನಶೆ ಮುಕ್ತ ಸಮಾಜ ನಿರ್ಮಾಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಕಾರ್ಯನಿರ್ವಹಿಸುತ್ತಿದೆ ಎಂದು ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಪವಾಡ ಬಸವಣ್ಣ ದೇವರ ಮಠದಲ್ಲಿ ಎಸ್‌ಕೆಡಿಆರ್‌ಪಿ ಯೋಜನೆ, ಬಿ.ಸಿ.ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದಲ್ಲಿ ಗಾಂಧಿ ಜಯಂತಿ ಹಾಗೂ ನಶೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನತೆ ದುಶ್ಚಟಗಳಿಗೆ ಬಲಿಯಾಗಲು ಸಾಮಾಜಿಕ ಹಾಗೂ ವೈಯಕ್ತಿಕ ಕಾರಣಗಳಿರಬಹುದು. ಆದರೆ ಅದನ್ನು ಮೆಟ್ಟಿ ನಿಂತು ಅದರಿಂದ ಹೊರಬರುವುದು ಮುಖ್ಯ. ನಶೆ ಮುಕ್ತ ಸಮಾಜ ನಿರ್ಮಾಣದಲ್ಲಿ ಸಮಾಜದ ಎಲ್ಲರೂ ಕೈಜೋಡಿಸಬೇಕು. ಮಹಾತ್ಮ ಗಾಂಧೀಜಿಯವರ ಆಶಯದಂತೆ ಸಮಾಜವನ್ನು ದುಶ್ಚಟಗಳಿಂದ ಮುಕ್ತಗೊಳಿಸಿ ಆರೋಗ್ಯಕರ ಹಾಗೂ ಸ್ವಾವಲಂಬಿ ಬದುಕಿನತ್ತ ಕೊಂಡೊಯ್ಯುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ. ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯವ್ಯಸನದಿಂದ ಹೊರಬರುವವರಿಗೆ ಹೊಸ ಬದುಕಿನ ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಸಂಕಷ್ಟದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಮಾಜಿ ಅಧ್ಯಕ್ಷ ರಾಮಸ್ವಾಮಿ ಮಾತನಾಡಿ, ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿರಬೇಕು. ದೇಶದ ಸತ್ಪ್ರಜೆಗಳಾಗಿ ಬದುಕು ನಡೆಸಬೇಕು. ಮಾದಕ ವಸ್ತುಗಳ ಮೋಡಿಗೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು. ವ್ಯಸನ ಮುಕ್ತ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಿ ಕೈ ಜೋಡಿಸಲು ಕಂಕಣಬದ್ಧರಾಗಬೇಕು. ಈಗಾಗಲೇ 1.35 ಲಕ್ಷಕ್ಕೂ ಹೆಚ್ಚು ಮದ್ಯವ್ಯಸನ ಮುಕ್ತರನ್ನಾಗಿಸಿದ್ದೇವೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಮಾತನಾಡಿ, ಸರ್ಕಾರ ಘೋಷಿಸುವ ಶೇ.25ರಷ್ಟು ಕೆಲಸಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಸೌಲಭ್ಯ, ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಮಾರ್ಗದರ್ಶನ, ಕೆರೆಗಳಲ್ಲಿ ಹೂಳೆತ್ತುವುದು, ನಿರಾಶ್ರಿತರಿಗೆ ಮನೆ ಕಟ್ಟಿಕೊಡುವುದು, ಡೇರಿಗಳಿಗೆ ಆರ್ಥಿಕ ನೆರವು, ದೇವಾಲಯ ನಿರ್ಮಾಣ ಹಾಗೂ ಪುರಾತನ ದೇವಾಲಯಗಳ ಜೀರ್ಣೋದ್ಧಾರಕ್ಕೆ ಅನುದಾನ, ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ, ಶಿಷ್ಯವೇತನ ಸೇರಿದಂತೆ ರಾಜ್ಯಾದ್ಯಂತ ವಿವಿಧ ಸಾಮಾಜಿಕ ಯೋಜನೆಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಿಲ್ಲಾಧ್ಯಕ್ಷ ವೆಂಕಟೇಶ್, ಸದಸ್ಯ ಬೈಲಮೂರ್ತಿ, ಹೇಮಂತ್, ಸಂತೋಷ್, ಭಾಗ್ಯಮ್ಮ, ಸರೋಜಮ್ಮ, ಸುಧಾ, ಹೊಸಕೋಟೆ ಕೃಷ್ಣಪ್ಪ, ಯಲಹಂಕ ಗೌರೀಶ್, ಗಿರೀಶ್, ನಗರ ಪೊಲೀಸ್ ಠಾಣೆ ಎಎಸ್ ವೆಂಕಟದಾಸಯ್ಯ, ಮಹಾಲಿಂಗಯ್ಯ, ಉದ್ಯಮಿ ನಿಸರ್ಗ ಮುನಿರಾಜು, ಕೆಂಪರಾಜು, ನೆಲಮಂಗಲ ತಾಲೂಕು ಯೋಜನಾಧಿಕಾರಿ ಸುಜಾತಶೆಟ್ಟಿ, ಸುಚೇಂದ್ರ ಮತ್ತಿತರರಿದ್ದರು.

ಪೋಟೋ 5 :

ನೆಲಮಂಗಲದ ಬಸವಣ್ಣ ದೇವರ ಮಠದಲ್ಲಿ ಎಸ್‌ಕೆಡಿಆರ್‌ಪಿ ಯೋಜನೆ, ಬಿ.ಸಿ .ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದಲ್ಲಿ ನಶೆಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಶ್ರೀ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಫ್ರೀಡಂ ಪಾರ್ಕ್‌, ವಿಧಾನಸೌಧ ಬಳಿ ರೈತರ ಪ್ರತಿಭಟನೆ
ಮಂತ್ರಾಲಯ ಮಠಕ್ಕೆ ತಲೆನೋವಾದ ಆನ್ಲೈನ್ ವಂಚಕರು