ತುರ್ತು ಪರಿಸ್ಥಿತಿ ಕರಾಳ ದಿನಗಳ ನೆನಪು: ಸಿ.ಟಿ.ರವಿ ಉಪನ್ಯಾಸ

KannadaprabhaNewsNetwork | Published : Jul 2, 2025 12:20 AM
30ಪೇಡ್‌ | Kannada Prabha

ಜಿಲ್ಲಾ ಬಿಜೆಪಿ ವತಿಯಿಂದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕರಾಳ ಇತಿಹಾಸಕ್ಕೆ 50 ವರ್ಷ’ ಕುರಿತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಂದ ಉಪನ್ಯಾಸ ಸೋಮವಾರ ಕುಂಜಿಬೆಟ್ಟು ಶಾರದಾ ಮಂಟಪದ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕರಾಳ ಇತಿಹಾಸಕ್ಕೆ 50 ವರ್ಷ’ ಕುರಿತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಂದ ಉಪನ್ಯಾಸ ಸೋಮವಾರ ಕುಂಜಿಬೆಟ್ಟು ಶಾರದಾ ಮಂಟಪದ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಕಸಿತ ಭಾರತ ಅಭಿಯಾನದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು ವಂದಿಸಿದರು.ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ‘ಏಕ್ ಪೇಡ್ ಮಾ ಕೇ ನಾಮ್’ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ಸಿ.ಟಿ. ರವಿ ಚಾಲನೆ ನೀಡಿದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಭಿಯಾನದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ, ಸಹ ಸಂಚಾಲಕ ಸಂಧ್ಯಾ ರಮೇಶ್, ದಿಲೇಶ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಮತ್ತಿತರರು ಇದ್ದರು.