ಸ್ವಾತಂತ್ರ್ಯ ಹೋರಾಟಗಾರರ ಶ್ರಮ ಸ್ಮರಿಸಿ

KannadaprabhaNewsNetwork |  
Published : Aug 16, 2026, 03:45 AM IST
ಞಚದಸಬಗತದ್ಜನಹ | Kannada Prabha

ಸಾರಾಂಶ

ದೇಶಕ್ಕಾಗಿ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಹಾಗೂ ಆದರ್ಶ ಮುಂದಿನ ಪೀಳಿಗೆಗೆ ಪರಿಚಯಿಸುವ ದಿನವಾಗಿದೆ

ಹನುಮಸಾಗರ: ದೇಶ ಸ್ವಾತಂತ್ರ್ಯ ಪಡೆಯಲು ನಡೆಸಿದ ಹೋರಾಟ ಸ್ಮರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹೇಳಿದರು.

ಸ್ಥಳೀಯ ಪಪಂ ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಟ್ಟಣದ ಕೆಪಿಎಸ್ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದದರು

ತ್ಯಾಗ,ಬಲಿದಾನ ಮತ್ತು ಹೋರಾಟದ ಫಲವಾಗಿ ಇಂದು ನಾವು ಸ್ವತಂತ್ರವಾಗಿ ಬದುಕುವ ಅವಕಾಶ ದೊರೆತಿದೆ. ಸ್ವಾತಂತ್ರ್ಯ ದಿನಾಚರಣೆ ಕೇವಲ ಸಂಭ್ರಮದ ದಿನವಾಗಿರದೇ ಹಾಗು ನಮ್ಮ ಪಪಂಯಿಂದ ಎಲ್ಲ ಸಹಕಾರ ಕೊಡಲಾಗುವದು ಎಂದರು.

ಪ್ರಾಚಾರ್ಯ ಭೀಮಪ್ಪ ಗೊಲ್ಲರ ಮಾತನಾಡಿ, ದೇಶಕ್ಕಾಗಿ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಹಾಗೂ ಆದರ್ಶ ಮುಂದಿನ ಪೀಳಿಗೆಗೆ ಪರಿಚಯಿಸುವ ದಿನವಾಗಿದೆ. ಬ್ರಿಟಿಷರ ಆಡಳಿತದಿಂದ ಭಾರತ ಮುಕ್ತಗೊಳಿಸಲು ಹಲವು ದಶಕಗಳ ಕಾಲ ದೇಶದ ವಿವಿಧ ಭಾಗಗಳಲ್ಲಿ ಹೋರಾಟ ನಡೆದವು. ಅಸಂಖ್ಯಾತ ಹೋರಾಟಗಾರರು ಜೈಲು ಶಿಕ್ಷೆ ಅನುಭವಿಸಿ ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ಕೆಲವರು ತಮ್ಮ ಪ್ರಾಣ ದೇಶಕ್ಕಾಗಿ ಅರ್ಪಿಸಿದರು.

ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರ ಜೀವನ, ದೇಶಪ್ರೇಮ ಮತ್ತು ತ್ಯಾಗದ ಆದರ್ಶ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಏಕತೆ, ಅಖಂಡತೆ ಹಾಗೂ ಸಂವಿಧಾನದ ಆಶಯ ಗೌರವಿಸುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಮಹಾತಯ್ಯ ಸೊಪ್ಪಿಮಠ, ಕೆಪಿಎಸ್ ಉಪಾಧ್ಯಕ್ಷ ಬಸವರಾಜ ದೇವಣ್ಣನವರ, ಸಿಆರ್‌ಪಿ ಲೆಂಕಪ್ಪ ವಾಲಿಕಾರ, ನಿವೃತ್ತ ದೈಹಿಕ ಶಿಕ್ಷಕ ಅಬ್ದುಲ್ ಕರೀಂ ವಂಟೆಳ್ಳಿ, ಹನುಮಂತ ರಾಯಬಾಗಿ, ವಿವಿಧ ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯ ಪರಿಕಲ್ಪನೆಗೆ ಒತ್ತು ನೀಡೋಣ: ಕೃಷ್ಣಕುಮಾರ್ ಶೆಟ್ಟಿ
ಸ್ವಾತಂತ್ರ್ಯ ಹಿರಿಯರ ತ್ಯಾಗದ ಫಲ: ಸ್ಟೆಲ್ಲಾ ವರ್ಗೀಸ್