ಕನ್ನಡಕ್ಕಾಗಿ ಹೋರಾಡಿದವರ ಸ್ಮರಣೆ ನಮ್ಮ ಕರ್ತವ್ಯ: ಸುನಿತಾ ಗಿರೀಶ್‌

KannadaprabhaNewsNetwork |  
Published : Nov 02, 2024, 01:22 AM IST
ಚಿತ್ರ.1: ಧ್ವಜಾರೋಹಣ ನಡೆಸುತ್ತಿರುವುದು.2: ಸುಂಟಿಕೊಪ್ಪ ಗ್ರಾಮ ಮಾಜಿ ಅಧ್ಯಕ್ಷ ಕ್ಲಾಡಿಯಸ್ ಲೋಬೋ ಅವರನ್ನು ಸನ್ಮಾನಿಸುತ್ತಿರುವುದು. | Kannada Prabha

ಸಾರಾಂಶ

ಇಲ್ಲಿನ ಕನ್ನಡವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಯಿತು. ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕನ್ನಡ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿದೆ. ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆ ಇಡೀ ವಿಶ್ವದ ಗಮನಸೆಳೆದಿದೆ ಎಂದು ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಹೇಳಿದರು.ಶುಕ್ರವಾರ ಇಲ್ಲಿನ ಕನ್ನಡವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ನಾಡು, ನುಡಿ, ಸಂಸ್ಕೃತಿಗಾಗಿ, ಕನ್ನಡನಾಡಿನ ಏಕೀಕರಣಕ್ಕಾಗಿ ಹೋರಾಡಿದಂತಹ ಮಹಾನ್‌ಚೇತನಗಳನ್ನು ಸ್ಮರಿಸಿಕೊಳ್ಳುತ್ತಾ ಅವರಿಗೆ ನುಡಿ ನಮನ ಸಲ್ಲಿಸಿ ಶಿರಭಾಗಿ ನಮಿಸುವುದು ನಮ್ಮ ಆದ್ಯಕರ್ತವ್ಯ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ವಹಿಸಿದ್ದರು.ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಿಲ್‌ ಕುಮಾರ್, ಮಾಜಿ ಅಧ್ಯಕ್ಷ ಕ್ಲಾಡಿಯಸ್ ಲೋಬೋ ಮಾತನಾಡಿದರು.ಇದೇ ಸಂದರ್ಭ ಕಳೆದ 28 ವರ್ಷಗಳ ಹಿಂದೆ ಸುಂಟಿಕೊಪ್ಪದಲ್ಲಿ ಕನ್ನಡ ವೃತ್ತವನ್ನು ಸ್ಥಾಪಿಸಲು ಶ್ರಮಿಸಿದ ಸುಂಟಿಕೊಪ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಕ್ಲಾಡಿಯಸ್ ಲೋಬೋ ಅವರನ್ನು ಸನ್ಮಾನಿಸಲಾಯಿತು.ಈ ಸಮಾರಂಭದಲ್ಲಿ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಯಶೋಧರ ಪೂಜಾರಿ, ಕೆ.ಪಿ.ಜಗನ್ನಾಥ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಲೀಲಾವತಿ ಮೇದಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾಗೇಶ ಪೂಜಾರಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಗ್ರಾ.ಪಂ. ಸದಸ್ಯರಾದ ಸೋಮನಾಥ್, ರಫಿಕ್ ಖಾನ್, ವಸಂತಿ, ಗ್ರಾ.ಪಂ. ಲೆಕ್ಕಪರಿಶೋಧಕಿ ಚಂದ್ರಕಲಾ, ಸುಂಟಿಕೊಪ್ಪ ನಾಡು ಗೌಡ ಸಮಾಜದ ಕಾರ್ಯದರ್ಶಿ ಕೌಶಿಕ್, ಬಿಲ್ಲವ ಸಮಾಜ ಅಧ್ಯಕ್ಷ ಮಣಿ ಮುಖೇಶ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಜೋವಿಟಾ ವಾಜ್, ತಲೆಹೊರೆ ಕನ್ನಡಾಭಿಮಾನಿ ಸಂಘ ಅಧ್ಯಕ್ಷ ಸಂತೋಷ್, ಲಯನ್ಸ್ ಸಂಸ್ಥೆ ಅಧ್ಯಕ್ಷ ಶಶಾಂಕ್, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮತ್ತಿತರರು ಇದ್ದರು.ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸರ್ಕಾರಿ ಪ್ರೌಢಶಾಲಾ ಮಕ್ಕಳು ನಾಡಗೀತೆ ಹಾಡಿದರು. ಕೆ.ಎಸ್. ಅನಿಲ್ ಸ್ವಾಗತಿಸಿದರು. ಎಂ.ಎಸ್. ಸುನಿಲ್ ನಿರೂಪಿಸಿದರು. ಕೆ.ಎಸ್.ಅನಿಲ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ