ಸಾಂಸ್ಕೃತಿಕ ನಾಯಕ ಬಸವಣ್ಣ ಸ್ಮರಣೆ, ನಮನ

KannadaprabhaNewsNetwork |  
Published : May 11, 2024, 01:32 AM IST
10ಕೆಪಿಎಲ್1:ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ನಗರದ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕೊಪ್ಪಳ: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ನಗರದ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ನಲೀನ್ ಅತುಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಇತರರಿದ್ದರು.

ಗಣ್ಯರು ಸೇರಿ, ಬಸವಣ್ಣನವರು ಹಾಗೂ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಪ್ರಭು ಹೆಬ್ಬಾಳ, ಮುಖಂಡರಾದ ಶರಣಪ್ಪ ವಕೀಲರು, ವಿರೂಪಣ್ಣ ನವೋದಯ, ಹೇಮರೆಡ್ಡಿ ಕೆಂಚರೆಡ್ಡಿ, ಮನೋಹರ, ಶಿವರೆಡ್ಡಿ, ಶಂಕರಗೌಡ ಹಿರೇಗೌಡ್ರ, ಸುರೇಶ, ಸೇರಿದಂತೆ ಬಸವ ಸಮಾಜದ ಮುಖಂಡರು, ಯುವಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪುತ್ಥಳಿಗೆ ಮಾಲಾರ್ಪಣೆ: ಬಸವ ಜಯಂತಿ ಪ್ರಯುಕ್ತ ನಗರದ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಕೊಪ್ಪಳ ತಹಸೀಲ್ದಾರ್ ವಿಠಲ್ ಚೌಗಲ್, ತಾಪಂ ಇಒ ದುಂಡಪ್ಪ ತುರಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಸಮಾಜದ ಮುಖಂಡರಾದ ಬಸವರಾಜ ಬಳ್ಳೊಳ್ಳಿ ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ