ಅನಧಿಕೃತ ಮಳಿಗೆ ವ್ಯಾಪಾರಸ್ಥರ ತೆರವು

KannadaprabhaNewsNetwork |  
Published : Apr 16, 2025, 12:32 AM IST
15ಸಿಎಚ್‌ಎನ್‌51ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ವರ್ಗ ಮಂಗಳವಾರ ಬೆಳ್ಳಂ ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುತ್ತಿರುವುದು. | Kannada Prabha

ಸಾರಾಂಶ

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸುತ್ತಿರುವುದು.

ಕನ್ನಡಪ್ರಭ ವಾರ್ತೆ ಹನೂರು

ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಅನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರುಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳೆಗೆದಾರರು ಕಳೆದು ಎಂಟು ವರ್ಷಗಳಿಂದ ಅನಧಿಕೃತ ಮಳಿಗೆಗಳನ್ನು ನಡೆಸುತ್ತಾ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾದಪ್ಪನ ಬೊಕ್ಕಸಕ್ಕೆ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು ಎನ್ನಲಾಗಿದೆ.

ಕಾರ್ಯದಕ್ಷತೆಗೆ ಮೆಚ್ಚುಗೆ:

ಇದುವರೆಗೂ ಕರ್ತವ್ಯ ನಿರ್ವಹಿಸಿದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್‌ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು. ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತ ಮಳಿಗೆದಾರರು ಅಂಗಡಿಗಳನ್ನು ತೆರೆವು ಮಾಡದೆ ಇದ್ದಿದ್ದರಿಂದ ಮಂಗಳವಾರ ಬೆಳಗ್ಗೆ ಪೊಲೀಸರು ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.ಕಳೆದ ಹಲವು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ₹2,34 ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ.ಎಈ ರಘು , ಕಾರ್ಯದರ್ಶಿ, ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ 21 ಅಂಗಡಿ ಮಾಲೀಕರು ಕಳೆದು 8 ವರ್ಷಗಳಿಂದ ಅನಧಿಕೃತ ಮಳಿಗೆಯಿಂದ ಲಕ್ಷಾಂತರ ರು. ಸಂಪಾದನೆ ಮಾಡಿದ್ದರು. ಪ್ರಾಧಿಕಾರಕ್ಕೆ ಯಾವುದೇ ಬಾಡಿಗೆ ಪಾವತಿ ಮಾಡುತ್ತಿರಲಿಲ್ಲ. ಇದರಿಂದ ಪ್ರಾಧಿಕಾರಕ್ಕೆ ಕೋಟ್ಯಂತರ ರು. ನಷ್ಟವಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಲಾಗಿತ್ತು. ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು ತೆರವುಗೊಳಿಸುವ ಮೂಲಕ ಪ್ರಾಧಿಕಾರದ ಆದಾಯ ಹೆಚ್ಚಿಸಿದ್ದಾರೆ.

-ಶರವಣ, ಟೆಂಡರ್ ಬಾಡಿಗೆದಾರ

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ