- ನಗರದ ವಿವಿಧ ವಾರ್ಡಿನಲ್ಲಿ ಭರ್ಜರಿ ಪ್ರಚಾರ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಹೀಗಾಗಿ, ಇದನ್ನು ಮೊದಲು ಕಿತ್ತೊಗೆಯಬೇಕಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಲೋಕಸಭಾ ಚುನಾವಣೆ ನಿಮಿತ್ತ ನಗರದ ಹಮಾಲರ ಕಾಲನಿಯಲ್ಲಿ ಬುಧವಾರ ಹಮ್ಮಿಕೊಂಡ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಧಾನಸಭಾ ಚುನಾವಣೆಯಲ್ಲಿ ಜನತೆಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ ಬಿಜೆಪಿಯವರು ಟೀಕೆ ಮಾಡಿದರು. ಆದರೆ ಅವರ ಟೀಕೆಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳಲಿಲ್ಲ. ಗ್ಯಾರಂಟಿ ಬಗ್ಗೆ ಎಲ್ಲ ರೀತಿಯ ಆರೋಪ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದು ಅಪ್ಪಟ ಸುಳ್ಳು ಹೇಳಿ ಜನರ ದಾರಿತಪ್ಪಿಸುವ ಕೆಲಸ ಮಾಡಿದ್ದರು. ಆದರೆ, ರಾಜ್ಯದ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕಾರ ನೀಡಿ ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ. ನಾವು ಹೇಳಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಸಂಕಷ್ಟವನ್ನು ದೂರ ಮಾಡಿದ್ದೇವೆ ಎಂದು ಹೇಳಿದರು.
ಯಲಬುರ್ಗಾ ಶಾಸಕ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿ, ಅಕ್ರಮವಾಗಿ ಹಣ ಗಳಿಸಿ ತಿಂದ ದೊಡ್ಡ ದೊಡ್ಡ ತಿಮಿಂಗಿಲಗಳು ಬಿಜೆಪಿಯಲ್ಲಿವೆ. ಕಾರ್ಪೋರೆಟ್ ಸಂಸ್ಥೆಗಳ ಮಾಲೀಕರ ಕಪಿಮುಷ್ಠಿಯಲ್ಲಿ ಮೋದಿ ಆಡಳಿತ ನಡೆಸುತ್ತಿದ್ದಾರೆ. ಬಡಜನರ ಹಿತಕ್ಕಿಂತ ಕಾರ್ಪೋರೆಟ್ ಕಂಪನಿಗಳ ಹಿತಕ್ಕೆ ಅಂಟಿಗೊಂಡಿರುವ ಭ್ರಷ್ಟರಕೂಟ ಸರ್ಕಾರವನ್ನು ಸೋಲಿಸಿ, ಪ್ರಜಾಪ್ರಭುತ್ವ ರಕ್ಷಿಸಿ ಎಂದರು.
ಬಿಜೆಪಿ ತೊರೆದು ಕೈ ಸೇರ್ಪಡೆ:
ಈ ಸಂದರ್ಭದಲ್ಲಿ ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್, ಕಾಂಗ್ರೆಸ್ ಮುಖಂಡ ಅಮರೇಶ ಕರಡಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷ, ಜಿಪಂ ಮಾಜಿ ಸದಸ್ಯ ಗೂಳಪ್ಪ ಹಲಗೇರಿ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಮುತ್ತುರಾಜ್ ಕುಷ್ಟಗಿ, ಅರುಣ್ ಅಪ್ಪುಶೆಟ್ಟಿ, ಗುರುರಾಜ್ ಹಲಗೇರಿ, ಮುಖಂಡರಾದ ರಾಜಶೇಖರ್ ಆಡೂರು, ಮೆಹೆಬೂಬ ಅರಗಂಜಿ, ಬಸಯ್ಯ ಹಿರೇಮಠ, ವೈಜನಾಥ ದಿವಟರ್, ಶಿವಕುಮಾರ್ ಶೆಟ್ಟರ್, ಅಜೀಮ್ ಅತ್ತಾರ, ಪ್ರಸನ್ನ ಗಡಾದ, ರೇಣುಕಾ ಕಲ್ಲಾಕ್ಷಪ್ಪ, ಮಂಜುನಾಥ ಗಾಳಿ, ವಿರುಪಾಕ್ಷಯ್ಯ ಗದುಗಿನಮಠ, ಈರಣ್ಣ ಗಾಣಿಗೇರ, ಮಂಜುನಾಥ ಹಂದ್ರಾಳ, ಜ್ಯೋತಿ ಗೊಂಡಬಾಳ ಸೇರಿದಂತೆ ಮತ್ತಿತರರಿದ್ದರು.