ನಿಸ್ವಾರ್ಥದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ: ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು

KannadaprabhaNewsNetwork |  
Published : Aug 04, 2026, 02:00 AM IST
ಕಾರ್ಯಕ್ರಮವನ್ನು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಕಲಿಸಿದ ಗುರುಗಳಿಗಿಂತ ಉನ್ನತ ಸ್ಥಾನ ಪಡೆದಾಗ ಅದು ಗುರುವಿನಲ್ಲಿ ಸಾರ್ಥಕ ಭಾವ ಮೂಡುತ್ತದೆ. ನಿವೃತ್ತಿ ಹೊಂದಿದ್ದರೂ ಸಾರ್ಥಕತೆಯ ಭಾವ ಕಾಣುತ್ತಿದೆ.

ಲಕ್ಷ್ಮೇಶ್ವರ: ಶಿಕ್ಷಣ ಇಂದು ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸಮಾಜ ಗೌರವದಿಂದ ಕಾಣುತ್ತದೆ. ನಿಸ್ವಾರ್ಥದಿಂದ ಸಮಾಜಕ್ಕೆ ಒಳ್ಳೆಯ ಕಾರ್ಯ ಮಾಡಬೇಕು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಭಾನುವಾರ ಪಟ್ಟಣದ ಬಾಳಿಹಳ್ಳಿಮಠ ಕಲ್ಯಾಣ ಮಂಟಪದಲ್ಲಿ ಜಿ.ಎಂ. ಮುಂದಿನಮನಿ ಅಭಿಮಾನ ಬಳಗ ಹಮ್ಮಿಕೊಂಡಿದ್ದ ಗುರುವಂದನೆ, ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಠಾನ ಪ್ರದರ್ಶನದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕಲಿಸಿದ ಗುರುಗಳಿಗಿಂತ ಉನ್ನತ ಸ್ಥಾನ ಪಡೆದಾಗ ಅದು ಗುರುವಿನಲ್ಲಿ ಸಾರ್ಥಕ ಭಾವ ಮೂಡುತ್ತದೆ. ನಿವೃತ್ತಿ ಹೊಂದಿದ್ದರೂ ಸಾರ್ಥಕತೆಯ ಭಾವ ಕಾಣುತ್ತಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಠಾನ ಪ್ರದರ್ಶನ ಎಲ್ಲರ ಮೆಚ್ಚುಗೆ ಗಳಿಸಿದೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಡಯಟ್ ಪ್ರಾಚಾರ್ಯರಾಗಿ ಜಿ.ಎಂ. ಮುಂದಿನಮನಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೆ ಛಾಪು ಮೂಡಿಸಿ ಸಾವಿರಾರು ಶಿಷ್ಯರನ್ನು ನಾಡಿಗೆ ನೀಡಿದ್ದು, ನಿವೃತ್ತಿ ನಂತರ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡುವ ಉದ್ದೇಶ ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್. ಪಟ್ಟಣಶೆಟ್ಟಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಅಬ್ದುಲ್ ಸತ್ತೂರ, ಡಾ. ಎಂ. ರಾಮಚಂದ್ರ, ಗಜಾನನ ಮನ್ನಿಕೇರಿ, ಐ.ಬಿ. ಬೆನಕೊಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಂಡಗೋಡದ ಲಾಮಾ ಗುರೂಜಿ, ಸುಲೇಮಾನ ಕಣಕೆ, ಟಿ. ಈಶ್ವರ, ಸಣ್ಣವೀರಪ್ಪ ಹಳ್ಳೆಪ್ಪನವರ, ಮಂಜುನಾಥ ಮಾಗಡಿ, ತಿಮ್ಮರಡ್ಡಿ ಅಳವಂಡಿ, ವಿ.ಎ. ಹುಡೇದ, ಜಿ.ಎನ್. ಉಪ್ಪಿನ, ಹರೀಶ ಲಕ್ಷ್ಮೇಶ್ವರ, ಬಸವರಾಜ ಹಿರೇಮನಿ, ಎಂ.ಕೆ. ಲಮಾಣಿ, ಬಿ.ಎಸ್. ಹರ್ಲಾಪೂರ, ಪ್ರವೀಣ ಬಾಳಿಕಾಯಿ ಸೇರಿ ಅನೇಕ ಮುಖಂಡರು, ಸಾಹಿತಿಗಳು ಉಪಸ್ಥಿತರಿದ್ದರು. ಪೂರ್ಣಾಜಿ ಖರಾಟೆ ಸ್ವಾಗತಿಸಿದರು. ಈಶ್ವರ ಮೇಡ್ಲೇರಿ, ಜೆ.ಎಸ್. ರಾಮಶೆಟ್ಟರ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪಂಪ ವೃತ್ತದಿಂದ ಬೆಳಗ್ಗೆ 9 ಗಂಟೆಗೆ ಸಾವಿರಾರು ಶಿಷ್ಯವೃಂದದ ಸಮ್ಮುಖದಲ್ಲಿ ವಾದ್ಯ ವೈಭವಗಳೊಂದಿಗೆ ಭವ್ಯ ಮೆರವಣಿಗೆ ನೆರವೇರಿತು. ನಂತರ ಜಿ.ಎಂ. ಮುಂದಿನಮನಿ ದಂಪತಿಗಳನ್ನು ಅದ್ಧೂರಿಯಾಗಿ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಫ್‌ಪಿಒಗಳ ಅಭಿವೃದ್ಧಿಗೆ ಮೌಲ್ಯವರ್ಧನೆ, ಇ-ಮಾರ್ಕೆಟಿಂಗ್ ಅಗತ್ಯ: ಜಯಣ್ಣ
ಬೂತಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು