ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಾಡಿಸಿಕೊಂಡಾಗ ಮಾತ್ರ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಇಲ್ಲವಾದಲ್ಲಿ ಸವಲತ್ತಿನಿಂದ ವಂಚಿತರಾಗುತ್ತೀರ ಎಂದು ಕಾರ್ಮಿಕ ನಿರೀಕ್ಷಕ ಟಿ.ಭೀಮೇಶ್ ಕಟ್ಟಡ ಕಾರ್ಮಿಕರಿಗೆ ತಿಳಿಸಿದರು.ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಹಲವು ಸವಲತ್ತುಗಳನ್ನು ಕೊಡುವ ಕಲ್ಯಾಣ ಇಲಾಖೆಯಾಗಿ ಮಾರ್ಪಟ್ಟಿದೆ. ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಶಕ್ತಿ ಬಂದಂತಾಗಿದೆ. ಕಾರ್ಮಿಕರ ಇಬ್ಬರು ಮಕ್ಕಳಿಗೆ ಪ್ರತಿ ವರ್ಷವೂ ಒಂದನೆ ತರಗತಿಯಿಂದ ಸ್ನಾತಕೋತ್ತರ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ, ಮದುವೆಗೆ ಸಹಾಯ ಧನ, ಸ್ವಾಭಾವಿಕ ಮರಣ ಹೊಂದಿದರೆ ಪರಿಹಾರ, ಅಪಘಾತದಲ್ಲಿ ಕಾರ್ಮಿಕ ಮೃತಪಟ್ಟರೆ 8 ಲಕ್ಷ ರು. ನೀಡಲಾಗುವುದು. ವೈದ್ಯಕೀಯ ಸಹಾಯಧನ, 60 ವರ್ಷ ತುಂಬಿದವರಿಗೆ ಪಿಂಚಣಿ, ಹೆರಿಗೆ ಭತ್ಯೆ,ತಾಯಿ ಮಗು ಸಹಾಯ ಹಸ್ತ ಆರೈಕೆಗೆ ಹಣ ಸಿಗುತ್ತದೆ ಎಂದರು.
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 10 ಸಾವಿರ ಕೋಟಿ ರು. ಇದೆ. ಬಡವರಿಗೆ ಮನೆಗಳನ್ನು ಕಟ್ಟಿಸಿಕೊಡುತ್ತಿಲ್ಲ. ಭ್ರಷ್ಟಾಚಾರ ತಡೆಯಲು ಹೋರಾಟ ಮಾಡಬೇಕಿದೆ. ಮುಂದಿನ ವರ್ಷದಿಂದ ಮೇ 1ನ್ನು ಹಬ್ಬದ ದಿನವನ್ನಾಗಿ ಆಚರಿಸಬೇಕಿದೆ. ಕಾರ್ಮಿಕರಲ್ಲಿ ತಿಳುವಳಿಕೆ ಮೂಡಿದಾಗ ಮಾತ್ರ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದರು.