ಶಿವಪುರ ಧ್ವಜ ಸತ್ಯಾಗ್ರಹ ಸೌಧದ ನವೀಕರಣ: ಕೆ.ಎಂ.ಉದಯ್

KannadaprabhaNewsNetwork |  
Published : Oct 14, 2026, 01:45 AM IST
12ಕೆಎಂಎನ್ ಡಿ33 | Kannada Prabha

ಸಾರಾಂಶ

ಧ್ವಜ ಸತ್ಯಾಗ್ರಹ ಸೌಧವನ್ನು ಅಭಿವೃದ್ಧಿಪಡಿಸುವಂತೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಜಿಲ್ಲೆಯ ಹಿರಿಯ ಸಾಹಿತಿಗಳ ಬಹಳ ದಿನಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಾವು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೌದದ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಡ ಹೇರಿದ್ದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸ್ವಾತಂತ್ರ್ಯದ ಹೋರಾಟದ ಕುರುಹಾದ ಶಿವಪುರ ಧ್ವಜ ಸತ್ಯಾಗ್ರಹ ಸೌಧವನ್ನು ಎರಡು ಕೋಟಿ ರು. ವೆಚ್ಚದಲ್ಲಿ ನವೀಕರಣ ಮತ್ತು ದುರಸ್ತಿ ಕಾಮಗಾರಿ ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು.

ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನವೀಕರಣ ಮತ್ತು ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಧ್ವಜ ಸತ್ಯಾಗ್ರಹ ಸೌಧವನ್ನು ಅಭಿವೃದ್ಧಿಪಡಿಸುವಂತೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಜಿಲ್ಲೆಯ ಹಿರಿಯ ಸಾಹಿತಿಗಳ ಬಹಳ ದಿನಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಾವು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೌದದ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಡ ಹೇರಿದ್ದೆ. ಇದರ ಫಲವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಲಾಖೆ ಮೂಲಕ ಅಗತ್ಯ ಅನುದಾನ ಮಂಜೂರು ಮಾಡಿದ್ದಾರೆ ಎಂದರು.

ಅನುದಾನದಲ್ಲಿ ಸತ್ಯಾಗ್ರಹ ಸೌಧ ಆವರಣದಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ನೃತ್ಯ ಕಾರಂಜಿ, ಒಳಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಸತ್ಯಾಗ್ರಹ ಹೋರಾಟಕ್ಕೆ ಸಂಬಂಧಿಸಿದಂತೆ 42 ಭಾವಚಿತ್ರ ಗಳಿಗೆ ವಿದ್ಯುತ್ ದೀಪ ಅಲಂಕಾರ ಹಾಗೂ ಹೋರಾಟವನ್ನು ಪ್ರತಿಬಿಂಬಿಸುವ ಪ್ರೊಜೆಕ್ಟರ್ ಸ್ಕ್ರೀನ್, ಗಾರ್ಡನ್ ದೀಪಾಲಂಕಾರ ಮತ್ತು ವಿದ್ಯುತ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಸತ್ಯಾಗ್ರಹ ಸೌಧಕ್ಕೆ ಬಣ್ಣ ಬಳಿಯುವುದು, ಆವರಣದ ತಗ್ಗು ಪ್ರದೇಶವನ್ನು ಮಣ್ಣಿನಿಂದ ಎತ್ತರಿಸುವುದು ಅಲ್ಲದೆ ಸೌಧದ ಎಡಭಾಗದಲ್ಲಿರುವ ಅನೆಕ್ಸ್ ಕಟ್ಟಡ ಶೌಚಾಲಯ ದುರಸ್ತಿ ಮತ್ತು ಕೊಳವೆ ಬಾವಿ ನಿರ್ಮಾಣ, ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆ ಜೊತೆಗೆ ಸೋತದ ರಕ್ಷಣೆಗಾಗಿ ಗುತ್ತಿಗೆ ಆಧಾರದ ಮೇಲೆ ಕಾವಲುಗಾರರು ಸ್ವಚ್ಛತೆ ಗಾರರನ್ನು ಡಿ ಗ್ರೂಪ್ ಆಧಾರದ ಮೇಲೆ ಎರಡು ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಪ್ರಸ್ತುತ ಬಿಡುಗಡೆ ಮಾಡಿರುವ ಎರಡು ಕೋಟಿ ಅನುದಾನ ಸತ್ಯಾಗ್ರಹ ಸೌಧದದ ಪೂರ್ಣ ಅಭಿವೃದ್ಧಿಗೆ ಸಾಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮದ್ದೂರು ನಗರಸಭೆ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್, ಮಾಜಿ ಸದಸ್ಯರಾದ ಟಿ.ಆರ್.ಪ್ರಸನ್ನ ಕುಮಾರ್, ವನಿತಾ, ಶಾಂತಮ್ಮ, ಕಸಾಪ ಮಾಜಿ ಅಧ್ಯಕ್ಷರಾದ ಮಾರಸಿಂಗನಹಳ್ಳಿ ರಾಮಚಂದ್ರ, ಕೆ.ಎಸ್.ಸುನಿಲ್ ಕುಮಾರ್, ಅಪೂರ್ವ ಚಂದ್ರ, ವಿ.ಹರ್ಷ, ಮನ್ಮುಲ ಅಧ್ಯಕ್ಷ ಎಂ.ಬಿ. ಹರೀಶ್ ಬಾಬು, ಚುಂಚಶ್ರೀ ಬಳಗದ ಡಾ. ಬಿ.ಕೃಷ್ಣ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ ಸ್ವಾಮಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದೇವಾನಂದ್, ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಮಾಧಾನ ಬದಿಗಿಟ್ಟು ಲಿಂಬಿಕಾಯಿ ಪರ ಪ್ರಚಾರ: ಕುಬೇರಪ್ಪ
ಗೊಂಬೆಗಳ ಪ್ರದರ್ಶನ ಸಂಸ್ಕೃತಿ, ಸಂಸ್ಕಾರಗಳ ಭಾವನಾತ್ಮಕ ಬೆಸುಗೆ: ಶಕುಂತಲಾ ಆನಂದ್