ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

KannadaprabhaNewsNetwork |  
Published : Apr 20, 2024, 01:07 AM IST
ರೇಣುಕಾಚಾರ್ಯ | Kannada Prabha

ಸಾರಾಂಶ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯನ್ನು ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ವೈಯಕ್ತಿಕ ಎಂದ ಸಿಎಂ, ಗೃಹ ಸಚಿವರ ವಿರುದ್ಧ ಗರಂ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯನ್ನು ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಬೃಹತ್ ರೋಡ್ ಶೋ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಟರಿ ಸರ್ಕಾರವಿದೆ. ಇದೊಂದು ಭಯೋತ್ಪಾದಕರ ಸರ್ಕಾರ. ಹುಬ್ಬಳ್ಳಿಯ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸ್‌ನಲ್ಲೇ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿಯಿಂದ ಮಾತನಾಡಿದ್ದು ಸರಿಯಲ್ಲ ಎಂದರು.

ಅನ್ಯಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇರಿದು ಕೊಂದಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹಾಳಾಗಿದೆ. ಇಂತಹ ದುಷ್ಕೃತ್ಯವನ್ನು ಯಾರು ಎಸಗುತ್ತಾರೋ, ಅಂತಹವರನ್ನು ಗುಂಡಿಟ್ಟು ಸಾಯಿಸಬೇಕು. ಇಂತಹ ದುಷ್ಕರ್ಮಿಗಳನ್ನು ನೇಣು ಹಾಕಿ ಸಾಯಿಸಬೇಕು. ಆಗ ಮಾತ್ರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿಗೆ ಬರುತ್ತದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರವು ಪಿಎಫ್‌ಐ- ಎಸ್‌ಡಿಪಿಐ ಮೇಲಿನ ಕೇಸ್‌ಗಳನ್ನು ವಾಪಸ್‌ ಪಡೆದಿದೆ. ಕಾನೂನು, ಸುವ್ಯವಸ್ಥೆ ಬಿಗಿ ಇದ್ದರೆ ಇಂತಹ ಘಟನೆಗಳು, ಕೃತ್ಯಗಳು ನಡೆಯುವುದಿಲ್ಲ. ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇಂತಹ ಕಾಂಗ್ರೆಸ್ ಸರ್ಕಾರಕ್ಕೆ ಬೇಸತ್ತಿರುವ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.

- - - (-ಫೋಟೋ: ರೇಣುಕಾಚಾರ್ಯ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!