ಜಗದ್ಗುರು ರೇಣುಕಾಚಾರ್ಯ ಜಯಂತಿ ಕುರಿತು ಚರ್ಚೆ: ಡಾ. ವೀರಸೋಮೇಶ್ವರ
ರಂಭಾಪುರಿ ಪೀಠದಲ್ಲಿ ಫೆ.27ರಿಂದ ಮಾ.3ರವರೆಗೆ ನಡೆಯಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಪೂರ್ವಭಾವಿ ಸಿದ್ಧತೆ ಸಭೆಯನ್ನು ಫೆ.9ರಂದು ಶ್ರೀಪೀಠದಲ್ಲಿ ಕರೆಯಲಾಗಿದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ತಿಳಿಸಿದರು. ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ಶ್ರೀ ರಂಭಾಪುರಿ ಜಗದ್ಗುರು ಸಾನ್ನಿಧ್ಯದಲ್ಲಿ ಶ್ರೀ ಪೀಠದಲ್ಲಿ ನಡೆದ ಬಾಳೆಹೊನ್ನೂರು ಪಟ್ಟಣದ ಪ್ರಮುಖರ ಸಭೆಯಲ್ಲಿ ಆಶೀರ್ವಚನ ನೀಡಿದರು. ಜಾತ್ರಾ ಮಹೋತ್ಸವ ಪೂರ್ವಭಾವಿ ಸಿದ್ಧತೆ ವಿಷಯ ಚರ್ಚಿಸಲು ಫೆ.9ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಯಡಿಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮಿ ಮತ್ತು ಸಿದ್ಧರಬೆಟ್ಟ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿ ನೇತೃತ್ವದಲ್ಲಿ ಬಾಳೆಹೊನ್ನೂರು ನಾಗರಿಕ ಸಮಾಜದ ಜೊತೆಗೆ ಮತ್ತೊಂದು ಸುತ್ತಿನ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಬಾಳೆಹೊನ್ನೂರಿನ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿ ಸಲಹೆ, ಸೂಚನೆ ಗಳನ್ನು ನೀಡಬೇಕು ಎಂದು ಜಗದ್ಗುರು ತಿಳಿಸಿದರು.
ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವಗೌಡ, ಕಾಫಿ ಬೆಳೆಗಾರ ಎಚ್.ಬಿ.ರಾಜಗೋಪಾಲ್, ಕೆ.ಎನ್.ಮರಿಗೌಡ, ಟಿ.ಎಂ.ನಾಗೇಶ್ ಕಲ್ಮಕ್ಕಿ, ಕಾಫಿ ಮಂಡಳಿ ಮಾಜಿ ಸದಸ್ಯ ಬಿ.ಎನ್.ಭಾಸ್ಕರ್, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಅರುಣೇಶ್, ಮಹಮ್ಮದ್ ಹನೀಫ್, ಜಾನ್ ವಿಲ್ಫ್ರೆಡ್ ಡಿಸೋಜಾ, ಪ್ರಮುಖರಾದ ಹಿರಿಯಣ್ಣ, ಕೆ.ಟಿ.ವೆಂಕಟೇಶ, ಸನತ್ ಶೆಟ್ಟಿ, ಬಿ.ಜಗದೀಶ್ಚಂದ್ರ, ಕೋಕಿಲ ಲಿಂಗಪ್ಪಗೌಡ, ಮಹೇಶ್ ಆಚಾರ್ಯ, ತಿಮ್ಮಯ್ಯ, ಎಚ್.ಆರ್.ಆನಂದ್ ಮತ್ತಿತರರು ಹಾಜರಿದ್ದರು.೦೩ಬಿಹೆಚ್‌ಆರ್ ೧:ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಎಂ.ಎಸ್.ಚನ್ನಕೇಶವ, ಟಿ.ಎಂ.ನಾಗೇಶ್, ಬಿ.ಎನ್.ಭಾಸ್ಕರ್, ಎಂ.ಎಸ್.ಅರುಣೇಶ್, ಮಹಮ್ಮದ್ ಹನೀಫ್ ಇದ್ದರು.