ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಹಿಂದಿನ ಉಪಾಧ್ಯಕ್ಷೆ ಜ್ಯೋತಿ ದಯಾನಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ರೇಣುಕಮ್ಮ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾದರು.
ಗ್ರಾಪಂನ ಒಟ್ಟು 16 ಸದಸ್ಯರಲ್ಲಿ ನಾಲ್ವರು ಸದಸ್ಯರು ಗೈರಾಗಿದ್ದರು. ಚುನಾವಣಾಧಿಕಾರಿಯಾಗಿ ಸಿಡಿಪಿಒ ಅರುಣ್‌ಕುಮಾರ್, ಸಹ ಚುನಾವಣಾಧಿಕಾರಿಯಾಗಿ ತಾಪಂ ವ್ಯವಸ್ಥಾಪಕ ಅನಿಲ್‌ಬಾಬು, ಪಿಡಿಒ ಚಲುವರಾಜು ಕಾರ್ಯ ನಿರ್ವಹಿಸಿದರು.ಈ ವೇಳೆ ಅಧ್ಯಕ್ಷ ಕೆ.ಆರ್. ಕೃಷ್ಣ, ಸದಸ್ಯರಾದ ಎಸ್.ಕೆ.ಬಾಲಕೃಷ್ಣ, ಕೆ.ಆರ್.ರಾಜೇಶ್, ಕೆ.ಜಿ. ಪುಟ್ಟರಾಜು, ಕೆ.ಬಿ. ಚಂದ್ರಶೇಖರ್, ಭಾರತಿ ಪ್ರಕಾಶ್, ಸಿ.ಬಿ. ಸರಸ್ವತಿ, ಸಿ.ಎಲ್. ಜ್ಯೋತಿ, ಪದ್ಮಾವತಿ, ಬಿ.ತಾಯಮ್ಮ, ಮುಖಂಡರಾದ ಅನಂತು, ಗೋವಿಂದರಾಜು ಇದ್ದರು.
ಮಳವಳ್ಳಿ:
ಪಂಚಾಯ್ತಿ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಶ್ರೀನಿವಾಸ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗೋಪಿನಾಥ್ ಘೋಷಿಸಿದರು.
ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ ಮಾತನಾಡಿ, ಸದಸ್ಯರ ಸಹಕಾರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಮಾರ್ಗದರ್ಶನದಿಂದ ಆಯ್ಕೆ ಮಾಡಿದ್ದು, ನೂತನ ಅಧ್ಯಕ್ಷ ಶ್ರೀನಿವಾಸ್ 14 ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು ಎಂದು ಸೂಚಿಸಿದರು.