ಕರುನಾಡ ವಿಜಯ ಸೇನೆಯಿಂದ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿಕನ್ನಡಪ್ರಭವಾರ್ತೆ, ಚಿತ್ರದುರ್ಗ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಹದಿನೇಳು ಮಂದಿ ಬಂಧಿಸಿರುವ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದು, ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಯಾರಿಗೂ ಜಾಮೀನು ಸಿಗಬಾರದು. ದರ್ಶನ್‍ರಿಂದ ಹಲವಾರು ಘಟನೆಗಳು ನಡೆಯುತ್ತಲೆ ಇವೆ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಎಲ್ಲರಿಗೂ ಉಗ್ರ ಶಿಕ್ಷೆಯಾಗಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ನಿಸಾರ್ ಅಹಮದ್, ಮಧುಸೂದನ್, ತಿಪ್ಪೇಸ್ವಾಮಿ, ನಾಗರಾಜ್‍ಮುತ್ತು, ಅಖಿಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.--------ರೇಣುಕಾಸ್ವಾಮಿ ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.-21ಸಿಟಿಡಿ7