ನಾರಾಯಣ ಮಾಯಾಚಾರಿ
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ಕಾರಣಕ್ಕೆ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ವರ್ಷ ಕೋಟ್ಯಂತರ ರುಪಾಯಿ ಅನುದಾನ ನೀಡುತ್ತಿದೆ. ಅದರಲ್ಲೂ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪಣ ತೊಟ್ಟಿ ನಿಂತಿವೆ. ಹೀಗಿದ್ದರೂ ಸರ್ಕಾರಿ ಶಾಲೆಗಳು ಇನ್ನೂ ಅಭಿವೃದ್ಧಿಯಾಗದೇ ದುರಸ್ತಿಯೊಂದಿಗೆ ಮೂಲ ಸೌಕರ್ಯಗಳಿಂದ ವಂಚಿತಗೊಂಡಿವೆ. ಇದೇ ಕಾರಣಕ್ಕೆ ಮಕ್ಕಳ ಪಾಲಕರು ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದಾರೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿಯ ರಾಜ್ಯ ಪ್ರಥಮ ಸ್ಥಾನ ಪಡೆದುಕೊಂಡಿರುವ ಕಾರಣಕ್ಕೆ ಮಕ್ಕಳ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಮನಸು ಮಾಡುತ್ತಿದ್ದಾರೆ. ಆದರೆ, ಸರ್ಕಾರಿ ಶಾಲೆಗಳ ಅಗತ್ಯ ಕೊಠಡಿಗಳ ವ್ಯವಸ್ಥೆ ಇಲ್ಲ. ಇದ್ದರೇ ಚಾವಣಿ ಕುಸಿದು ಬಿದ್ದಿವೆ. ಮಳೆಗಾಲ ಬಂದರೆ ಸೋರುವ ಶಾಲೆಗಳು ಇರುವುದರಿಂದ ಈ ಶಾಲೆಗಳತ್ತ ಪೋಷಕರು ಮನಸು ಮಾಡುತ್ತಿಲ್ಲ.
ಈಗಾಗಲೇ ತಾಲೂಕಿನಲ್ಲಿ ೨೬೧ ಸರ್ಕಾರಿ ಶಾಲೆಗಳಿವೆ. ಇದರಲ್ಲಿ ೬೮ ಸಾವಿರಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಹೊಂದಿದ್ದು ಅದರಂತೆ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳ ಹಾಜರಾತಿ ಏರಿಕೆಯಾಗುತ್ತಿದೆ. ಇದರಿಂದ ಮಕ್ಕಳ ಸಂಖ್ಯಾನುಸಾರ ಇನ್ನೂ ೨೫೬ ಕೊಠಡಿಗಳ ನಿರ್ಮಾಣ, ಈಗಿರುವ ಹಳೆಯ ೩೧೭ ಶಾಲಾ ಕೊಠಡಿಗಳು ರಿಪೇರಿ, ೧೨೩ ಶೌಚಾಲಯಗಳು, ೩೦ ಶಾಲೆಗಳಿಗೆ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕಿದೆ. ೬೮ ಶಾಲೆಗಳಿಗೆ ಆಟದ ಮೈದಾನದ ಅವಶ್ಯಕತೆ ಇದೆ. ೧೭ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಬೇಕಿದೆ. ಅಂದಾಜು ೩೦೦ಕ್ಕೂ ಹೆಚ್ಚು ಕಾಯಂ ಶಿಕ್ಷಕರ ಅಗತ್ಯತೆ ಇದೆ.ಶೌಚಾಲಯ, ನೀರಿನ ವ್ಯವಸ್ಥೆ ಆಗಬೇಕು:
ಗೆದ್ದಲಮರಿ ಗ್ರಾಮದ ಸರ್ಕಾರಿ ಶಾಲೆಗಳು ಎರಡಿದ್ದರೂ ಹಾಜರಾತಿಯಲ್ಲಿ ಮಾತ್ರ ಯಾವುದೇ ಕುಂಠಿತಗೊಂಡಿಲ್ಲ. ಹೀಗಾಗಿ ಸಂಪೂರ್ಣ ಬಿದ್ದು ಹಾಳಾಗಿ ಹೋಗುತ್ತಿರುವ ಸರ್ಕಾರಿ ಶಾಲೆಯ ಜೀರ್ಣೋದ್ಧಾರ ಕಾರ್ಯ ಪ್ರಾರಂಭಿಸಿ ಇಲ್ಲಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ.
-----ಕೋಟ್
-ಸಿ.ಎಸ್.ನಾಡಗೌಡ(ಅಪ್ಪಾಜಿ) ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ ಬೆಂಗಳೂರು
೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ತಾಲೂಕಿನ ಮಕ್ಕಳು ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಶಿಕ್ಷಕರ ಕೊರತೆ ಇದೆ. ಬಹುತೇಕ ಶಾಲೆಗಳ ದುರಸ್ತಿ ಸೇರಿದಂತೆ ಹೊಸ ಶಾಲೆಗಳ ನಿರ್ಮಾಣ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸಬೇಕು ಎಂದು ಸಮಗ್ರ ಮಾಹಿತಿಯನ್ನು ಮೇಲಧಿಕಾರಿಗಳ ಮೂಲಕ ಸರ್ಕಾರಕ್ಕೆ ನೀಡಲಾಗಿದೆ. ಆದರೆ, ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೇ ಆ ಮಾರ್ಗದಲ್ಲಿ ಶಿಕ್ಷಣ ಇಲಾಖೆ ಮುಂದುವರೆಯಲಿದೆ.