ಚಾಮರಾಜನಗರದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

KannadaprabhaNewsNetwork |  
Published : Nov 02, 2024, 01:35 AM ISTUpdated : Nov 02, 2024, 01:36 AM IST
1ಸಿಎಚ್‌ಎನ್‌66ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರ ಅವರಣದಲ್ಲಿ ಕರ್ನಾಟಕ-ಸಂಭ್ರಮ-50ರ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದರು.

ರೇಷ್ಮೆ ಸಚಿವ ಕೆ.ವೆಂಕಟೇಶ್‌ರಿಂದ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದಲ್ಲಿ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದರು.

ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರ ಅವರಣದಲ್ಲಿ ಕರ್ನಾಟಕ-ಸಂಭ್ರಮ-50ರ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪರದೆ ಸರಿಸುವ ಮೂಲಕ ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹಲ್ಮಿಡಿ ಕನ್ನಡದ ಮೊದಲ ಶಾಸನವಾಗಿದೆ. ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಮೊದಲು ಪತ್ತೆ ಹಚ್ಚಲಾದ ಶಾಸನದಲ್ಲಿ 16 ಸಾಲುಗಳ ಬರಹವಿದ್ದು, ಶಾಸನವು ಕ್ರಿಸ್ತಶಕ 450ರ ಸುಮಾರಿನ ಕಾಲದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನಗಳು, ಅವಲೋಕನಗಳು ನಡೆದಿವೆ. ಸರ್ಕಾರದ ನಿರ್ದೇಶನದನ್ವಯ ಈ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಶಾಸನದ ಪ್ರಕ್ಕೃತಿ ಸ್ಥಾಪಿಸಲಾಗಿದೆ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ