ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳು ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಭೇಟಿ

KannadaprabhaNewsNetwork |  
Published : Nov 16, 2025, 02:45 AM IST

ಸಾರಾಂಶ

ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳು ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಶನಿವಾರ ಭೇಟಿ ನೀಡಿದರು. ಈ ತಂಡದಲ್ಲಿ 100 ಮಂದಿ ಕಾರ್ಯದರ್ಶಿಗಳು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರನ್ನು ಭೇಟಿ ಮಾಡಿ‌ ಸಹಕಾರ ಕ್ಷೇತ್ರದಲ್ಲಿ ಅವರ ಅನುಭವವನ್ನು ಪಡೆದುಕೊಂಡರು.

ಕನ್ನಡಪ್ರಭ ವಾರ್ತೆ ಮಂಗಳೂರು

ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳು ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಶನಿವಾರ ಭೇಟಿ ನೀಡಿದರು.

ಈ ತಂಡದಲ್ಲಿ 100 ಮಂದಿ ಕಾರ್ಯದರ್ಶಿಗಳು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರನ್ನು ಭೇಟಿ ಮಾಡಿ‌ ಸಹಕಾರ ಕ್ಷೇತ್ರದಲ್ಲಿ ಅವರ ಅನುಭವವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ‌ ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ಉತ್ತಮವಾಗಿ ಹಾಗೂ ರಾಜಕೀಯ ರಹಿತವಾಗಿ ಕಾರ್ಯನಿರ್ವಹಿಸುತ್ತಿದೆ.

ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾದರಿ ಬ್ಯಾಂಕ್ ಅಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಎಸ್ ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು, ಆಧುನಿಕ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತಿದೆ. ಬ್ಯಾಂಕಿನ 113 ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 39,000ಕ್ಕೂ ಹೆಚ್ಚು ನವೋದಯ ಸಂಘಗಳು ರಚನೆ ಮಾಡಿದ್ದು, ಸುಮಾರು 4 ಲಕ್ಷಕ್ಕೂ ಹೆಚ್ಚು ಸದಸ್ಯ ಕುಟುಂಬವನ್ನು ಹೊಂದಿದೆ ಎಂದರು.

ಸನ್ಮಾನ: ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳು, ನಿರ್ದೇಶಕ ಎಸ್. ಆರ್. ಗೌಡ ಶಿರಾ ಅವರ ಮುಂದಾಳತ್ವದಲ್ಲಿ ಸನ್ಮಾನಿಸಿದರು.

ಹಾಗೆಯೇ ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ

ತುಮಕೂರು ಸಹಕಾರಿ ಹಾಲು ಒಕ್ಕೂಟದ ಪ್ರತಿನಿಧಿಗಳ ಪರವಾಗಿ ನಿರ್ದೇಶಕ ಎಸ್. ಆರ್. ಗೌಡ ಶಿರಾ ಅವರನ್ನು ಬ್ಯಾಂಕ್ ವತಿಯಿಂದ

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.

ಈ ಸಂರ್ಭದಲ್ಲಿ ಅಧಿಕಾರಿಗಳಾದ ಚೈತ್ರ, ಗಿರೀಶ್, ಮುಖಂಡರಾದ ಶಿವಣ್ಣ, ಈರಣ್ಣ ಮತ್ತು ಕಿರಣ್ ಗೌಡ ಹಾಗೂ ಕಾರ್ಯದರ್ಶಿಗಳು ಇದ್ದರು. ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮಹಾಪ್ರಬಂಧಕರಾದ ಸುನಿಲ್ ಕುಮಾರ್ ಹೊಳ್ಳ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ