ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಚಿಂತನ-ಸಾಂಸ್ಕೃತಿಕ ಬಳಗದ ವತಿಯಿಂದ ಏರ್ಪಡಿಸಿದ್ದ ಬಿಎಲ್‌ಡಿಇ ಸಂಸ್ಥೆ ಕಟ್ಟಿ ಬೆಳೆಸಿದ ಡಾ.ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಹಳಕಟ್ಟಿ ಅವರು ವಚನ ಸಾಹಿತ್ಯದ ಜತೆಗೆ ಕೆರೆಗಳ, ನಿರ್ಮಾಣ ಸೇರಿದಂತೆ ವಿವಿಧ ಸೇವೆಗಳನ್ನು ನಾಡಿಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಹೆಮ್ಮರವಾಗಿ ಬೆಳೆದಿರುವ ಬಿಎಲ್‌ಡಿಇ ಸಂಸ್ಥೆಯಿಂದ ಬೆಂಗಳೂರಿನಲ್ಲೂ ಬೃಹತ್ ಕ್ಯಾಂಪಸ್ ತಲೆ ಎತ್ತಿದೆ. ಆದರೆ, ಮೊದಲು ಬಿಎಲ್‌ಡಿಇ ಕಟ್ಟಿ ಬೆಳೆಸುವ ಕಾರ್ಯ ಸುಲಭವಾಗಲಿರಲಿಲ್ಲ. ನನ್ನ ತಂದೆ ದಿ.ಬಿ.ಎಂ. ಪಾಟೀಲರು ಪಟ್ಟ ಪ್ರಯಾಸ ಅಷ್ಟಿಷ್ಟಲ್ಲ. ಅಂದು ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜ್ ಮೊದಲಾದ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಬ್ಯಾಂಕ್ ಸಾಲಕ್ಕಾಗಿ ಯಾರೂ ಮುಂದೆ ಬರಲಿಲ್ಲ. ಕೊನೆಗೆ ನಮ್ಮ ತಂದೆಯವರೇ ಸ್ವಂತ ಆಸ್ತಿಯನ್ನೇ ಗ್ಯಾರಂಟಿಯಾಗಿ ನೀಡಿ ಸಹಿ ಮಾಡಿದರು. ಹೀಗಾಗಿ ಬಿಎಲ್‌ಡಿಇ ಬೆಳೆಯಲು ಸಾಧ್ಯವಾಯಿತು ಎಂದರು.ಶಿವಮೊಗ್ಗ ಬೆಕ್ಕಿನ ಕಲ್ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಕೆಎಲ್‌ಇ ವಿವಿ ಪ್ರಾಧ್ಯಾಪಕ ಡಾ.ಅವಿನಾಶ ಕವಿ ಉಪನ್ಯಾಸ ನೀಡಿದರು. ಚಿಂತನ ಸಾಂಸ್ಕೃತಿಕ ಬಳಗದ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ ಸ್ವಾಗತಿಸಿದರು.