ಕನ್ನಡಪ್ರಭ ವಾರ್ತೆ ಶಿರಾ
ಗಣರಾಜ್ಯೋತ್ಸವವು ಭಾರತವು ಅಧಿಕೃತವಾಗಿ ಗಣರಾಜ್ಯವಾದ ಐತಿಹಾಸಿಕ ಕ್ಷಣವನ್ನು ನೆನಪಿಸುತ್ತದೆ. ದೇಶದ ವಿವಿಧ ಭಾಗಗಳಲ್ಲಿ ರಕ್ಷಣಾ ಪಡೆಗಳು ಪೆರೇಡ್ ಮಾಡುವ ಮೂಲಕ, ಶಾಲೆಗಳು, ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಹಬ್ಬದ ವಾತಾವರಣ ನಿರ್ಮಾಣವಾಗುತ್ತದೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನಾಗರೀಕರೆಲ್ಲರೂ ಸ್ಮರಿಸಬೇಕು ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ ಹೇಳಿದರು.ತಾಲೂಕಿನ ಆಂಧ್ರ ಗಡಿಗ್ರಾಮ ತಮ್ಮ ಹುಟ್ಟೂರಾದ ಚಿರತಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
೧೯೫೦ ರಲ್ಲಿ ಈ ದಿನದಂದು, ಜನವರಿ ೨೬, ೧೯೫೦ ರಂದು ಸಂವಿಧಾನ ಸಭೆಯು ಅಂಗೀಕರಿಸಿದ ಭಾರತೀಯ ಸಂವಿಧಾನವು ಜಾರಿಗೆ ಬಂದಿತು. ನಮ್ಮ ದೇಶದ ಸ್ವತಂತ್ರ ಸಂವಿಧಾನವನ್ನು ರಚಿಸಲು ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಕರಡು ಸಮಿತಿಯನ್ನು ಅಧ್ಯಕ್ಷರಾಗಿ ನೇಮಿಸಲು ನಿರ್ಣಯವನ್ನು ಅಂಗೀಕರಿಸಲಾಯಿತು. ಭಾರತ ಸಂವಿಧಾನವು ೧೯೪೯ ರ ನವೆಂಬರ್ ೨೬ ರಂದು ಅಂಗೀಕಾರವಾಗಿ, ೧೯೫೦ ರ ಜನವರಿ ೨೬ ರಂದು ಜಾರಿಗೆ ಬಂತು. ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ ೨೬ ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಈ ಇತಿಹಾಸವನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಉಚಿತವಾಗಿ ತಟ್ಟೆ ಹಾಗೂ ಲೋಟಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷ ಉಮೇಶ್, ಸದಸ್ಯರಾದ ಗುರುಸ್ವಾಮಿ, ಮಹೇಶ್, ಹನುಮಕ್ಕ, ಶಿಲ್ಪಾ, ಲಕ್ಷ್ಮೀದೇವಿ, ಕವಿತಾ, ಕೃಷ್ಣಮೂರ್ತಿ, ಮಮತಾ ಸೇರಿದಂತೆ ಶಿಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.