ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿನ ೪೦ ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮ್ಯಾಗ್ನೆಟ್ ಮತ್ತು ಕೆಪಿಎಸ್ ಹೆಸರಿನಲ್ಲಿ ವಿಲೀನ ಮಾಡಲಾಗುತ್ತಿದೆ. ಇದರಿಂದ ಬಡ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂವಿಧಾನದ ಆರ್ಟಿಕಲ್ ೨೧ಎ ನಂತೆ ಜನಸಾಮಾನ್ಯರಿಗೆ ಗುಣಮಟ್ಟದ ಉಚಿತ ಶಿಕ್ಷಣದ ಹಕ್ಕು ಸರ್ಕಾರಗಳು ನೀಡುವಲ್ಲಿ ವಿಫಲವಾಗಿವೆ. ರಾಜ್ಯದ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕಪಿಮುಷ್ಠಿಯಲ್ಲಿವೆ. ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ ಖಾಸಗಿ ಸಂಸ್ಥೆಗಳಿಗೆ ನೆರವಾಗಲು ಸರ್ಕಾರವು ಸಂವಿಧಾನ, ಸಮಾಜ ವಿರೋಧಿ ಕೆಲಸಕ್ಕೆ ಮುಂದಾಗಿದೆ ಎಂದರು.ದೇಶದ ಪ್ರಜಾಪ್ರಭುತ್ವ ಉಳಿಸಲು ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು, ಏಕ ರೂಪ ಶಿಕ್ಷಣ ನೀತಿ ಜಾರಿಗೆ ತರಬೇಕು. ರಾಜ್ಯದ ೪೧,೯೦೫ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ ೫ನೇ ತರಗತಿ ವರೆಗೆ ದ್ವಿಭಾಷೆಯ ಸಿಬಿಎಸ್ಸಿ ಮಾದರಿ ಶಿಕ್ಷಣ, ೬-೧೨ನೇ ತರಗತಿ ವರೆಗೆ ನವೋದಯ ಮಾದರಿ ಸಿಬಿಎಸ್ಸಿ ವಸತಿ ಶಾಲಾ ಶಿಕ್ಷಣ, ಅನುದಾನವನ್ನು ಶಿಕ್ಷಣ ಇಲಾಖೆಗೆ ನೀಡದೇ ನೇರವಾಗಿ ಎಸ್‌ಡಿಎಂಸಿ ಖಾತೆಗೆ ನೀಡುವಂತೆ ಒತ್ತಾಯಿಸಿದರು.
ತಾಲೂಕು ಗೌರವಾಧ್ಯಕ್ಷ ಶಿವಳ್ಳಿ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಬೂದನೂರು ಪುಟ್ಟಸ್ವಾಮಿ, ಹಸಿರು ಸೇನೆ ಅಧ್ಯಕ್ಷ ಸಂತೋಷ್ ಮಂಡ್ಯಗೌಡ, ಎಸ್‌ಡಿಎಂಸಿ ಅಧ್ಯಕ್ಷ ತಗ್ಗಹಳ್ಳಿ ಅನಿಲ್‌ಕುಮಾರ್, ಮಂಜು ಗೋಷ್ಠಿಯಲ್ಲಿದ್ದರು.ಜ.೨೩ರಂದು ಆನಂದಾಳ್ವಾರ್ ಪ್ರೌಢಶಾಲೆ ಸುವರ್ಣ ಮಹೋತ್ಸವಕನ್ನಡಪ್ರಭ ವಾರ್ತೆ ಮಂಡ್ಯಆನಂದ ಶಿಕ್ಷಣ ಸಂಸ್ಥೆ, ಎಂ.ಕೆ.ಆನಂದಾಳ್ವಾರ್ ಪ್ರೌಢಶಾಲೆ, ಸುರ್ವಣ ಮಹೋತ್ಸವ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಎಂ.ಕೆ.ಆನಂದಾಳ್ವಾರ್ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಸಮಾರಂಭ ಜ.೨೩ರಂದು ಬೆಳಗ್ಗೆ ೧೧ ಗಂಟೆಗೆ ಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಶಿಕ್ಷಕ ಚಂದಗಾಲು ಲೋಕೇಶ್ ತಿಳಿಸಿದರು.
ಆದಿಚುಂಚನಗಿರಿ ಶಾಖಾ ಮಠದ ಶ್ರೀಸೋಮೇಶ್ವರನಾಥ ಸ್ವಾಮೀಜಿ ಸಾನಿಧ್ಯವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸುವರು. ಸೆಸ್ಕ್ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಸ್ವರ್ಣಾನಂದ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಆಶಯ ಭಾಷಣ ಮಾಡಲಿದ್ದು, ಸಂಸ್ಥೆಯ ಅಧ್ಯಕ್ಷ ಡಾ.ಗಿರಿಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಶಾಸಕರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಮರಿತಿಬ್ಬೇಗೌಡ, ಬಿ.ರಾಮಕೃಷ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದರು.ಮಧ್ಯಾಹ್ನ ೨ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮಾರೋಪ ಭಾಷಣ ಮಾಡುವರು, ಸಾಹಿತಿ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.ಮ.ರಾಮಕೃಷ್ಣ ಆಶಯ ಭಾಷಣ ಮಾಡುವರು. ಸಂಸ್ಥೆಯ ಅಧ್ಯಕ್ಷ ಡಾ.ಗಿರಿಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಕೆ.ವಿವೇಕಾನಂದ, ಮಾಜಿ ಶಾಸಕರಾದ ಎ.ಎಸ್.ರವೀಂದ್ರ ಶ್ರೆಕಂಠಯ್ಯ, ಕೆ.ಟಿ.ಶ್ರೆಕಂಠೇಗೌಡ, ಇಸ್ಕಾನ್‌ನ ಮಹೋತ್ಸಾಹ ಚೈತನ್ಯದಾಸ್, ಗಣಪತಿದಾಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ವಿವರಿಸಿದರು.ಸಂಸ್ಥೆಯ ಖಜಾಂಚಿ ಎ.ಪಿ.ಸ್ವಾಮಿಗೌಡ, ನಿರ್ದೆಶಕರಾದ ಕೆ.ಪುಟ್ಟಸ್ವಾಮಿ, ಬಸವರಾಜು, ಎ.ಜಿ.ದಶರಥ, ಲೋಕೇಶ್ ಚಂದಗಾಲು ಇದ್ದರು.