ಪುಟ...2ಕ್ಕೆಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ: ತಹಶೀಲ್ದಾರ್ ಪ್ರಕಾಶ

KannadaprabhaNewsNetwork |  
Published : Jan 21, 2025, 12:32 AM IST
ಸಭೇ | Kannada Prabha

ಸಾರಾಂಶ

ದೇವರಹಿಪ್ಪರಗಿ ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ತಹಸೀಲ್ದಾರ್ ಪ್ರಕಾಶ ಸಿಂದಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದೇವರಹಿಪ್ಪರಗಿ

ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ತಹಸೀಲ್ದಾರ್ ಪ್ರಕಾಶ ಸಿಂದಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಕಚೇರಿ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಅತಿಥಿಗಳಿಗೆ ಆಸನದ, ಅಲ್ಫೋಪ ಆಹಾರದ ವ್ಯವಸ್ಥೆಗೆ ಕ್ರಮ ವಹಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಶಿಷ್ಟಾಚಾರದ ಬಗ್ಗೆ ಹಾಗೂ ಮೂಲಭೂತ ಸೌಲಭ್ಯ ವ್ಯವಸ್ಥೆ ವೇದಿಕೆ ನಿರ್ಮಾಣ ಸೇರಿದಂತೆ ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ರಾಷ್ಟ್ರೀಯ ಕಾರ್ಯಕ್ರಮದ ಪೂರ್ವಭಾವಿ ಸಭೆಯಿದ್ದ ಕಾರಣ ಹಲವು ಅಧಿಕಾರಿಗಳು ಗೈರು ಹಾಜರಿ ಬಗ್ಗೆ ಪ್ರಶ್ನೆಗೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು. ನಂತರ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಅವರು ಮಾತನಾಡಿ, ಧ್ವಜಾರೋಹಣ, ಆರೋಹಣ ಸರಿಯಾದ ಸಮಯ ಪಾಲನೆ ಮಾಡಬೇಕು ಎಂದು ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗ, ವಿವಿಧ ಸಂಘಟನೆಗಳ ಹಾಗೂ ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!