ಕನ್ನಡಪ್ರಭ ವಾರ್ತೆ ಬೀದರ್
ಈ ಕುರಿತು ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರನ್ನು ನಿಯೋಗದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ, ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಯಾವುದೇ ಅಭ್ಯಂತರ ಇಲ್ಲ. ಅಭ್ಯಂತರ ಇರುವುದು ಮೂರ್ತಿ ಸ್ಥಾಪನೆ ಸ್ಥಳದ ಬಗ್ಗೆ ಮಾತ್ರ ಎಂದು ತಿಳಿಸಿದರು.
ಗ್ರಾಮದ ನಡು ರಸ್ತೆಯಲ್ಲಿ ಮೂರ್ತಿ ಕೂಡಿಸುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಗಲಿದೆ. ಅವಘಡಗಳಿಗೆ ಕಾರಣವಾಗಲಿದೆ. ಹೀಗಾಗಿ ರಸ್ತೆ ಬದಿಯಲ್ಲಿ ಮೂರ್ತಿ ಕೂಡಿಸಿದರೆ ಯಾರಿಗೂ ತೊಂದರೆ ಆಗುವುದಿಲ್ಲ. ಮಹಾ ಪುರುಷರ ಮೂರ್ತಿಗಳಿಗೂ ಧಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.ತಾಲೂಕಿನ ಅಧಿಕಾರಿಗಳು ಸಂತಪುರದಲ್ಲಿ ನಡೆಸಿದ ಎಲ್ಲ ಸಮುದಾಯಗಳ ಮುಖಂಡರ ಸಭೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಇನ್ನೊಂದು ಬದಿಯಲ್ಲಿ ಬಸವೇಶ್ವರ ಮೂರ್ತಿ ಕೂಡಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದರು. ಈಗ ಕೆಲವರ ಕುಮ್ಮಕ್ಕಿನಿಂದ ವಿನಾ ಕಾರಣ ಕಿರಿಕಿರಿ ಮಾಡಲಾಗುತ್ತಿದೆ. ದಕ್ಷ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಹೊರೆಸಿ, ಅವರ ವರ್ಗಾವಣೆಗಾಗಿ ಪ್ರತಿಭಟನೆ ನಡೆಸುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.
ರಾಷ್ಟ್ರೀಯ ಬಸವ ದಳದ ಜಿಲ್ಲಾ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲ್ ಪಾಟೀಲ ಖಾಜಾಪುರ, ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಮುಖಂಡರಾದ ದತ್ತು ಪಾಟೀಲ, ಆನಂದ ದೇವಪ್ಪ, ಮಹಾದೇವ ತರನಳ್ಳಿ ಮತ್ತಿತರರು ಇದ್ದರು.