ಹಳೇ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಮನವಿ

KannadaprabhaNewsNetwork |  
Published : Jan 30, 2024, 02:04 AM IST
ಪೊಟೋ ಜ.28ಎಂಡಿಎಲ್ 3. ಎನ್.ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರು ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ರಾಜ್ಯ ನೌಕರರ ಸಂಘದವರು ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಮುಧೋಳ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಪ್ರಭ ವಾರ್ತೆ ಮುಧೋಳ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಾಧ್ಯಕ್ಷ ರಾಜು ವಾರದ ಮಾತನಾಡಿ, ರಾಜ್ಯ ಸರ್ಕಾರ ನೊಂದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಹಂಬಲದೊಂದಿಗೆ ಕಾಂಗ್ರೆಸ್ ನೀಡಿದ್ದ 5 ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದ್ದು, ಇದು ಜನಮಣ್ಣನೆಗೆ ಕಾರಣವಾಗಿದೆ. ಅದರಂತೆ ಸರ್ಕಾರಿ ನೌಕರರಿಗೆ ನೀಡಿರುವ ಭರವಸೆಯಂತೆ ನಮ್ಮ ಬೇಡಿಕೆ ಈಡೇರಿಸಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಆರ್.ಬಿ.ತಿಮ್ಮಾಪುರ, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಹೇಳಿದರು. ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ, ರಮೇಶ ಅರಕೇರಿ, ಮಲ್ಲಿಕಾರ್ಜುನ ಹುಲಸೂರ, ಬಸವರಾಜ ಬಳ್ಳಾರಿ, ಪರಶುರಾಮ ಬಗಲಿ, ಐ.ಎಂ. ಧಾರವಾಡಮಠ, ಪ್ರಕಾಶ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನಾಂಶ: ಕೌಟುಂಬಿಕ ಕೋರ್ಟ್‌ ಆದೇಶ ರದ್ದುಪಡಿಸಿ ಕೇಸ್‌ ವಾಪಸ್‌
ಮೇ 17ಕ್ಕೆ ಅಂಡಮಾನ್‌ಗೆ ಮಾನ್ಸೂನ್‌ ಪ್ರವೇಶ