ಶಿರಾಡಿ ಸುರಂಗಕ್ಕೆ ಅನುಮತಿಗಾಗಿ ಗಡ್ಕರಿಗೆ ಸಿದ್ದು ಮನವಿ

KannadaprabhaNewsNetwork |  
Published : Jun 29, 2024, 12:35 AM ISTUpdated : Jun 29, 2024, 09:40 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ ಗಡ್ಕರಿಯನ್ನು ಭೇಟಿ  ಮಾಡಿದರು.  | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದರು.

 ನವದೆಹಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಬೆಳಗಾವಿ–ಹುನಗುಂದ-ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಇದೇ ವೇಳೆ ಕೃತಜ್ಞತೆ ಸಲ್ಲಿಸಿದ ಅವರು, ಹಲವು ಯೋಜನೆಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ 5225 ಕಿ.ಮೀ. ಉದ್ದದ ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಆ ಕುರಿತು ಕ್ರಮ ಕೈಗೊಳ್ಳುವಂತೆ ಕೋರಿದರು.

ಏನೇನು ಪ್ರಸ್ತಾವನೆ?: - ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸುವುದು, ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಸುರಂಗ ನಿರ್ಮಿಸುವ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು, ಬೆಳಗಾವಿಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವುದು;

 ಬೇಲೂರು-ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥವಾಗಿ ಪರಿವರ್ತನೆ, ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವುದು, ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ-ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸುವುದು ಸೇರಿದಂತೆ ಹಲವು ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಮನವಿ ಮಾಡಿದರು.ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ