ಹೊಳಬಸು ಶೆಟ್ಟರಗೆ ಪರಿಷತ್‌ ಸ್ಥಾನ ನೀಡಲು ಮನವಿ

KannadaprabhaNewsNetwork |  
Published : May 28, 2024, 01:08 AM IST
ಹೊಳಬಸು ಶೆಟ್ಟರಗೆ ಪರಿಷತ್‌ ಸ್ಥಾನ ನೀಡಲು ಸಿಎಂ ಸಿದ್ದರಾಮಯ್ಯನವರಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿ ಕೃಷ್ಣಾದಲ್ಲಿ ಹೊಳಬಸು ಶೆಟ್ಟರ್‌ಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿ ಕೃಷ್ಣಾದಲ್ಲಿ ಬಾದಾಮಿ, ಬಾಗಲಕೋಟೆ ಮತಕ್ಷೇತ್ರದ ಸುಮಾರು ಎರಡು ಸಾವಿರ ಅಭಿಮಾನಿ ಬಳಗದವರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಯುವ ಮುಖಂಡರ ಹೊಳಬಸು ಶೆಟ್ಟರ್‌ಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಆಪ್ತರಾದ ಹೊಳಬಸು ಶೆಟ್ಟರ ಅವರು ಹಲವಾರ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಬದಾಮಿಯಿಂದ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳು ಆಯ್ಕೆಯಾದ ಬಳಿಕ ಕ್ಷೇತ್ರದ ಜವಾಬ್ದಾರಿ ವಹಿಸಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಇವರ ಪರಿಶ್ರಮದ ಫಲವಾಗಿ ಕ್ಷೇತ್ರದಲ್ಲಿ ಪಕ್ಷ ಬಲಿಷ್ಠಗೊಂಡಿದೆ. ಪರಿಷತ್‌ ಚುನಾವಣೆಯಲ್ಲಿ ಅವರಿಗೆ ಅವಕಾಶ ನೀಡುವ ಮೂಲಕ ಅವರ ಮಾಡಿದ ಸೇವೆಗೆ ಪ್ರತಿಫಲ ನೀಡಬೇಕು. ಮತ್ತಷ್ಟು ಜನರ ಸೇವೆ ಮಾಡಲು ಅವರಿಗೆ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕಿನ ಮುಂಖಂಡರಾದ ಪಿ.ಆರ್. ಗೌಡರ, ಎಂ.ಬಿ. ಹಂಗರಗಿ, ಎಂ.ಡಿ. ಯಲಿಗಾರ, ಹನುಮಂತ ಯಕ್ಕಪ್ಪನ್ನವರ, ರಾಜಮಹ್ಮದ ಬಾಗವಾನ, ಮಧು ಯಡ್ರಾಮಿ, ರೇವಣಸಿದ್ದಪ್ಪ ನೋಟಗಾರ, ಹನುಮಂತ ದೇವರಮನಿ ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!