ಇಲಾಖಾ ಸಿಬ್ಬಂದಿ ಭರ್ತಿಗೆ ಸರ್ಕಾರಕ್ಕೆ ಮನವಿ : ಯಶ್‌ಪಾಲ್ ಸುವರ್ಣ

KannadaprabhaNewsNetwork |  
Published : Sep 27, 2026, 02:45 AM IST
ಪ್ರಜಾ ಸೇವಾ ಆಂದೋಲನವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು | Kannada Prabha

ಸಾರಾಂಶ

ಉಡುಪಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೊರತೆ ಇದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸಿಬ್ಬಂದಿ ಭರ್ತಿ ಮಾಡಲು ಮನವಿ ಮಾಡಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿಗಳಿದ್ದಾಗ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಿ ಜನರಿಗೆ ಸಹಾಯವಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ : ಉಡುಪಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೊರತೆ ಇದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸಿಬ್ಬಂದಿ ಭರ್ತಿ ಮಾಡಲು ಮನವಿ ಮಾಡಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿಗಳಿದ್ದಾಗ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಿ ಜನರಿಗೆ ಸಹಾಯವಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.ಅವರು ಇಲ್ಲಿನ ತೆಂಕನಿಡಿಯೂರು ಗಣೇಶೋತ್ಸವ ಸಭಾಭವನದಲ್ಲಿ ಶನಿವಾರ ಉಡುಪಿ ಕ್ಷೇತ್ರ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದರು.ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವೆ ಆಂದೋಲನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಸಮಸ್ಯೆಗಳ ಬಗ್ಗೆ ಅರ್ಜಿ ನೀಡಿದಲ್ಲಿ ಸ್ಥಳದಲ್ಲೇ ಅಧಿಕಾರಿಗಳ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಮತ್ತು ಅರ್ಜಿ ನೀಡಿದ 21 ದಿನಗಳ ಒಳಗೆ ಸಮಸ್ಯೆಗೆ ಪರಿಹಾರ ನೀಡುವುದು ಕಡ್ಡಾಯವಾಗಿದ್ದು, ಅಧಿಕಾರಿಗಳು ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಬಂದು ಅವರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎನ್ನುವ ಕಾರಣಕ್ಕೆ ಪ್ರಜಾಸೇವೆ ಆಂದೋಲನ ವನ್ನು ಕೈಗೊಳ್ಳಲಾಗುತ್ತಿದೆ. ಇದು ಕಾಟಾಚಾರದ ಕಾರ್ಯಕ್ರಮವಾಗದೇ ಜನರಿಗೆ ತಮ್ಮ ಅಹವಾಲುಗಳಿಗೆ ಸ್ಪಂದನೆ ದೊರೆತು ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದರು.ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ತಹಸೀಲ್ದಾರ್ ಪಿ. ಗುರುರಾಜ್, ಗ್ರಾಪಂ ಆಡಳಿತಾಧಿಕಾರಿ ಹೇಮಂತ್ ಕುಮಾರ್, ಮಲ್ಪೆ ಠಾಣೆ ಉಪನಿರೀಕ್ಷಕ ಅನಿಲ್, ವೃತ್ತನಿರೀಕ್ಷಕ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು. ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಣೇಶ ವಿಗ್ರಹ ವಿಸರ್ಜನೆ ಸಂದರ್ಭ ನಾಲ್ಕು ಮಂದಿಗೆ ವಿದ್ಯುತ್ ಸ್ಪರ್ಶ : ಇಬ್ಬರು ಗಂಭೀರ
ಕಾರಿಡರ್‌ ಆವರಣಗೋಡೆ ಕುಸಿತ: ಓರ್ವ ಗಂಭೀರ, ಮೂವರಿಗೆ ಗಾಯ