ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಗೃಹ ಸಚಿವರಿಗೆ ಮನವಿ.

KannadaprabhaNewsNetwork |  
Published : Jan 26, 2024, 01:47 AM IST
 | Kannada Prabha

ಸಾರಾಂಶ

ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಬೇಡಿಕೆಗಳು ಸೇರಿದಂತೆ ಹಾಗೂ 7ನೇ ವೇತನ ಆಯೋಗದಿಂದ ಶೀಘ್ರವೇ ವರದಿ ಪಡೆದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಕೊರಟಗೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ನೇತೃತ್ವ ದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಬೇಡಿಕೆಗಳು ಸೇರಿದಂತೆ ಹಾಗೂ 7ನೇ ವೇತನ ಆಯೋಗದಿಂದ ಶೀಘ್ರವೇ ವರದಿ ಪಡೆದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಕೊರಟಗೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ನೇತೃತ್ವ ದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪಟ್ಟಣದ ರಾಜೀವ್ ಭವನಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮಿಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷ ಹೆಚ್.ಎಂ ರುದ್ರೇಶ್ ನೇತೃತ್ವದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು ಭೇಟಿ ಮಾಡಿ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ 7ನೇ ವೇತನ ಆಯೋಗದ ಅನುಷ್ಠಾನಗೊಳಿಸಬೇಕು, ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಿ ನಗದು ರಹಿತ ಚಿಕತ್ಸೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮುಂದಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಪರವಾಗಿ ಧ್ವನಿ ಎತ್ತಬೇಕೆಂದು ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ರುದ್ರೇಶ್, ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಜಿಲ್ಲೆ, 183 ತಾಲೂಕು ಗಳಲ್ಲಿ ಶಾಖೆಗಳನ್ನು ಹೊಂದಿದ್ದು ಸಮಸ್ತ 6 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯ ಸಂಘವಾಗಿದ್ದು, ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿರುವ ಹೆಮ್ಮೆಯ ಸಂಘಟನೆಯಾಗಿದೆ, ರಾಜ್ಯದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಎಲ್ಲಾ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳೆವಣಿಗೆಯಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾದ ಪಾತ್ರವಹಿಸಿದೆ.

ಆಡಳಿತರೂಢ ಸರ್ಕಾರದ ಭಾಗವಾಗಿರುವ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಾವುಗಳು ರಾಜ್ಯ ಸರ್ಕಾರಿ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ತಾವು ನೌಕರರಿಗೆ ನೀಡಿರುವ ಸಹಕಾರ ಹಾಗೂ ಬೆಂಬಲ ಅವಿಸ್ಮರಣೀಯ, ಇದಕ್ಕಾಗಿ ತಮಗೆ ಸಮಸ್ತ ರಾಜ್ಯ ಸರ್ಕಾರ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ, ಹಾಗೆಯೇ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ತಾವುಗಳು ನೀಡುವ ಮಾರ್ಗದರ್ಶನ ಹಾಗೂ ಸೂಚನೆಯಂತೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ನಾವುಗಳು ಪ್ರಾಮಾಣಿಕವಾಗಿ ತಮ್ಮೊಂದಿಗೆ ಸಹಕರಿಸುತ್ತೇವೆ ಎಂದು ತಿಳಿಸುವ ಮೂಲಕ ಮನವಿ ಮಾಡಿದರು.

ರಾಜ್ಯ ಸರ್ಕಾರ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ, ಆದ್ದರಿಂದ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ರಾಜ್ಯದ ಎಲ್ಲಾ ನೌಕರರ ಪರವಾಗಿ ಮನವಿಯೊಂದಿಗೆ ಆಗ್ರಹಿಸಲಾಗಿದೆ ಎಂದು ತಿಳಿಸಿದರು.ಈ ವೇಳೆ ಸಂಘದ ಕಾರ್ಯದರ್ಶಿ ಜಯಣ್ಣ, ಉಪಾಧ್ಯಕ್ಷ ಬಿ.ಜಿ.ಹನುಮಂತರಾಯಪ್ಪ, ನಿರ್ದೇಶಕರುಗಳಾದ ವಿದ್ಯಾಶ್ರೀ, ಪ್ರಸಾದ್, ಪ್ರಾಚಾರ್ಯರುಗಳಾದ ಈರಣ್ಣ, ನೆರಂ ನಾಗರಾಜು, ಲಕ್ಷ್ಮೀಪುತ್ರ, ತಿಪ್ಪೇಸ್ವಾಮಿ, ನಟರಾಜು ಸೇರಿದಂತೆ ವಿವಿಧ ಇಲಾಖಾ ನೌಕರರು. ಶಿಕ್ಷಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!