ಬಜೆಟ್ ವೇಳೆ ಗ್ರಾಮ ಸಹಾಯಕರನ್ನು ಡಿ ಗ್ರೂಪ್ ಗೆ ಸೇರಿಸಲು ಒತ್ತಾಯಿಸಿ ಕೊಡಗು ಜಿಲ್ಲಾ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದಿಂದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಬಜೆಟ್ ವೇಳೆ ಗ್ರಾಮ ಸಹಾಯಕರನ್ನು ಡಿ ಗ್ರೂಪ್ ಗೆ ಸೇರಿಸಲು ಒತ್ತಾಯಿಸಿ ಕೊಡಗು ಜಿಲ್ಲಾ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದಿಂದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕಳೆದ ಹಲವಾರು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಇಂದಿಗೂ ನಮ್ಮನ್ನು ಖಾಯಂಗೊಳಿಸಿಲ್ಲ. ಮುಂದಿನ ಬಜೆಟ್‌ನಲ್ಲಿ ನಮ್ಮನ್ನು ಖಾಯಂ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಕೊಡಗು ಜಿಲ್ಲೆ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಸಿ. ಸುರೇಶ್ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.