ಕನ್ನಡಪ್ರಭ ವಾರ್ತೆ ಮೈಸೂರು
ಎಲ್ಲಾ ಹೋರಾಟಗಳ ಪ್ರತಿಫಲವಾಗಿ ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 56432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿತ್ತು. ನಂತರವೂ ವಿವಿಧ ಇಲಾಖೆಗಳ ಸಚಿವರು ಅತೀ ಶೀಘ್ರದಲ್ಲಿ ನೇಮಕಾತಿ ಮಾಡುತ್ತೇವೆ ಎಂದು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ಭ್ರಮನಿರಸನ ಉಂಟು ಮಾಡಿದೆ. 5 ತಿಂಗಳು ಕಳೆದಿದ್ದರೂ ಇದುವರೆಗೂ ಯಾವುದೇ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸಿಲ್ಲ ಎಂದು ಅವರು ಕಿಡಿಕಾರಿದರು.
ರಾಜ್ಯ ಸರ್ಕಾರ ತೀರ್ಮಾನಿಸಿದಂತೆ 56432 ಹುದ್ದೆಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಹಾಗೂ ಪಾರದರ್ಶಕ ನೇಮಕಾತಿಗಾಗಿ ಕೆಪಿಎಸ್ಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ಎಲ್ಲಾ ನೇಮಕಾತಿಗಳ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.ರಾಜ್ಯದಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.
ಈ ವೇಳೆ ಉದ್ಯೋಗ ಆಕಾಂಕ್ಷಿಗಳ ಹೋರಾಟದ ಸಮಿತಿ ಜಿಲ್ಲಾ ಸಂಚಾಲಕಿ ಎಸ್.ವಿ.ನೀತುಶ್ರೀ, ಸದಸ್ಯರಾದ ಎಸ್. ಸುಮಾ, ರಣಜಿತ್ ಧೂಪತ್, ಪೂರ್ಣಿಮಾ ಇದ್ದರು.