ಹುಬ್ಬಳ್ಳಿ:
ಪಾಲಿಕೆಯಲ್ಲಿ ಹಲವು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ 134 ಪೌರ ಕಾರ್ಮಿಕರ ನೇರನೇಮಕಾತಿ, ಪೌರ ಕಾರ್ಮಿಕರ ಮೃತಪಟ್ಟ ಕುಟುಂಬಕ್ಕೆ ಅನುಕಂಪದ ನೇಮಕಾತಿ ಹಾಗೂ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಶಾಸಕರು, ನೇರವೇತನ, ನೇರನೇಮಕಾತಿ ಮೊದಲ ಹಂತದ 134 ಪೌರ ಕಾರ್ಮಿಕ ಹುದ್ದೆಗಳಿಗೆ ಬುಧವಾರ ಅಂತಿಮ ಪಟ್ಟಿ ಬಿಡುಗಡೆ ಮಾಡುವಂತೆ ಸೂಚಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಶೀಘ್ರದಲ್ಲಿಯೇ ನೇಮಕಾತಿ ಪತ್ರ ವಿತರಿಸುವುದಾಗಿ ಭರವಸೆ ನೀಡಿದರು.ಎರಡನೇ ಹಂತದ 157 ಹುದ್ದೆಗಳಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು. 3 ತಿಂಗಳ ಒಳಗಾಗಿ ಅಂತಿಮ ಆಯ್ಕೆ ಪಟ್ಟಿ ಸಿದ್ಧಪಡಿಸಬೇಕು. 3ನೇ ಹಂತದಲ್ಲಿ 252 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಪಾಲಿಕೆ ಆಯುಕ್ತರಿಗೆ ಈಗಾಗಲೇ ಸೂಚಿಸಲಾಗಿದೆ. ಸರ್ಕಾರದಿಂದ ಅವಶ್ಯಕ ಸಹಕಾರ ನೀಡುವುದಾಗಿ ಭರವಸೆ ನೀಡಿದರು.