ಕನ್ನಡಪ್ರಭ ವಾರ್ತೆ ಶಿವಮೊಗ್ಗ
1987ರಲ್ಲಿ ರಾಷ್ಟ್ರಮಟ್ಟದ ಜ್ಞಾನಪೀಠ ಪ್ರಶಸ್ತಿಯನ್ನ ಮೊಟ್ಟಮೊದಲ ಬಾರಿಗೆ ಪಡೆದ ಹೆಗ್ಗಳಿಕೆ ಕುವೆಂಪುರವರಿಗೆ ಇದೆ. 1968ರಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯೂ ಲಭಿಸಿದೆ. ಶ್ರೀ ರಾಮಾಯಣ ದರ್ಶನಂ ಎಂಬ ಮಹಾ ಕಾವ್ಯವನ್ನ ರಚಿಸಿದ್ದಾರೆ. ಕಾನೂರು ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಮಗಳು ಎಂಬ ಶ್ರೇಷ್ಠಮಟ್ಟದ ಕಾದಂಬರಿಗಳನ್ನು ರಚಿಸಿದ್ದಾರೆ. ಜಯ ಭಾರತ ಜನನಿಯ ತನುಜಾತೆ ಎಂಬ ರಾಜ್ಯಗೀತೆಯನ್ನು ಸಹ ರಚಿಸಿದ್ದಾರೆ. ಇವರ ಗೌರವಾರ್ಥ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್‌ನ ಮುಖಂಡ ಸಂಸದರಿಗೆ ವಿವರಿಸಿದರು.
ಆದ್ದರಿಂದ ತಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರನ್ನು ಉದ್ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳಲು ಟ್ರಸ್ಟ್‌ನ ಮುಖಂಡರು ಕೋರಿದರು.ಹುಬ್ಬಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣರವರ ಹೆಸರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣನವರ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನೂ ಸಹ ಉದ್ಘೋಷಣೆ ಮಾಡುವುದು ಬಾಕಿ ಇದ್ದು, ಕೇಂದ್ರ ಸರ್ಕಾರ ಈ ನಾಲ್ಕು ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ಎರಡು ವರ್ಷ 6 ತಿಂಗಳ ಹಿಂದೆ ಶಿಫಾರಸು ಮಾಡಿರುವಂತೆ ಕೂಡಲೇ ಈ ನಾಲ್ಕೂ ಹೆಸರುಗಳನ್ನು ಕೇಂದ್ರ ಸರ್ಕಾರದಿಂದ ಉದ್ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳಲು ಟ್ರಸ್ಟ್‌ನ ಮುಖಂಡರು ಮನವಿ ಮಾಡಿದರು.