ವಿಜಯಪುರ: ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ, ಮಹಿಳಾ ಗೌರವ ಹಾಗೂ ವಿಶ್ವವಿದ್ಯಾಲಯದ ಘನತೆ ಕಾಪಾಡುವ ಉದ್ದೇಶದಿಂದ ಡಾ.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಎನ್.ಎಲ್. ಮಲ್ಲಿಕಾರ್ಜುನ ಅವರ ನೇಮಕಾತಿ ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದ್ರಾವಿಡ ವಿದ್ಯಾರ್ಥಿ ಪರಿಷತ್ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ, ರಾಹುಲ ಕಳಸದ, ಮಂಜುನಾಥ ಕವಳಿ, ಸಂದೇಶ ಕುಮಟಗಿ, ಆದರ್ಶ, ದರ್ಶನ, ಸಂದೀಪ, ವಿಜಯ ಉಪಸ್ಥಿತರಿದ್ದರು.