ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹ

KannadaprabhaNewsNetwork |  
Published : Sep 12, 2025, 12:06 AM IST
ಹಾವೇರಿ ತಾಲೂಕಿನ ಗಾಂಧಿಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಎದುರು ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ.

ಹಾವೇರಿ: ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿನ ಗೊಂದಲವನ್ನು ಖಂಡಿಸಿ, ಪದವಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗುರುವಾರ ಗಾಂಧಿಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾ ಸಂಚಾಲಕಿ ಪೂಜಾ ನಂದಿಹಳ್ಳಿ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ ಎಂದರು.ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠ, ಪ್ರವಚನಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ.

ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!