ಅಳ್ನಾವರದಲ್ಲಿ ರೈಲ್ವೆ ಪಾರ್ಸಲ್ ಸೇವೆ ಆರಂಭಿಸಲು ಮನವಿ

KannadaprabhaNewsNetwork |  
Published : Feb 09, 2026, 02:45 AM IST
ಅಳ್ನಾವರದ ಮೂಲಕ ಸಂಚರಿಸುವ ರೈಲುಗಳಿಗೆ ನಿಲುಗಡೆ ಮತ್ತು ಗೂಡ್ಸ ಫಾರ್ಸಲ ಸೇವೆ ಪ್ರಾರಂಭಿಸಲು ರೇಲ್ವೆ ಸಚಿವರಿಗೆ ಮನವಿ ಮಾಡಲಾಯಿತು. | Kannada Prabha

ಸಾರಾಂಶ

ಬೆಳಗಾವಿ-ಬೆಂಗಳೂರು ನಡುವೆ ನಿತ್ಯ ಸಂಚರಿಸುವ ರೈಲಿಗೆ ನಿಲುಗಡೆ ಮತ್ತು ಅಳ್ನಾವರ ನಿಲ್ದಾಣದಲ್ಲಿ ಈ ಹಿಂದೆ ಇದ್ದ ಪಾರ್ಸಲ್‌ ಸೇವೆ ಪುನರಾರಂಭಿಸುವ ಬಗ್ಗೆ ಪರಿಶೀಲಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಕೊಳ್ಳುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭರವಸೆ ನೀಡಿದ್ದಾರೆ.

ಅಳ್ನಾವರ: ಭಾಗದ ಪ್ರಯಾಣಿಕರ ಬೇಡಿಕೆಯಂತೆ ಬೆಳಗಾವಿ-ಬೆಂಗಳೂರು ನಡುವೆ ನಿತ್ಯ ಸಂಚರಿಸುವ ರೈಲಿಗೆ ನಿಲುಗಡೆ ಮತ್ತು ಅಳ್ನಾವರ ನಿಲ್ದಾಣದಲ್ಲಿ ಈ ಹಿಂದೆ ಇದ್ದ ಪಾರ್ಸಲ್‌ ಸೇವೆ ಪುನರಾರಂಭಿಸುವ ಬಗ್ಗೆ ಪರಿಶೀಲಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಕೊಳ್ಳುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭರವಸೆ ನೀಡಿದ್ದಾರೆ.

ದಾಂಡೇಲಿ-ಅಳ್ನಾವರ ನಡುವೆ ಪ್ರಾರಂಭಿಸಲಾಗಿರುವ ನೂತನ ರೈಲಿಗೆ ಚಾಲನೆ ನೀಡಲು ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ಇಲ್ಲಿಯ ನಿಯೋಗ ಮನವಿ ಸಲ್ಲಿಸಿತು. ಅಳ್ನಾವರದಿಂದ ರಾತ್ರಿ ರಾಣಿ ಚೆನ್ನಮ್ಮ ರೈಲು ತೆರಳಿದ ಆನಂತರ ಬೆಂಗಳೂರು ಕಡೆಗೆ ಹೋಗಲು ಯಾವುದೇ ರೈಲಿನ ವ್ಯವಸ್ಥೆ ಇಲ್ಲ. ಇದೇ ಮಾರ್ಗದಲ್ಲಿ ಸಂಚರಿಸುವ ಬೆಳಗಾವಿ-ಬೆಂಗಳೂರು (20654/20653) ರೈಲಿಗೆ ನಿಲುಗಡೆ ಸೌಲಭ್ಯ ಕಲ್ಪಿಸಿದರೆ ಬಹಳಷ್ಟು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದ್ದಾರೆ.

ಕಟ್ಟಿಗೆ ಪೀಠೋಪಕರಣಗಳಿಗೆ ಹೆಸರಾಗಿರುವ ಅಳ್ನಾವರದಿಂದ ಸಿದ್ಧಗೊಂಡಿರುವ ಪೀಠೋಪಕರಣಗಳು ನಿತ್ಯ ದೇಶದ ವಿವಿಧೆಡೆ ಕಳುಹಿಸಲಾಗುತ್ತಿದ್ದು, ಹಿಂದೆ ಬ್ರಿಟಿಷ್ ಕಾಲದಿಂದಲೂ ಇದ್ದ ಪಾರ್ಸಲ್‌ ಸೇವೆಯನ್ನು ಈಗ ಸ್ಥಗಿತಗೊಳಿಸಿರುವ ಕಾರಣ ಉಂಟಾಗುತ್ತಿರುವ ತೊಂದರೆಯನ್ನು ಸಚಿವರ ಗಮನಕ್ಕೆ ತಂದಾಗ ಆದಷ್ಟು ಶೀಘ್ರ ಪಾರ್ಸಲ್‌ ಸೇವೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದರ ಜತೆಗೆ ವಾಸ್ಕೋ, ಸಂಪರ್ಕ ಕ್ರಾಂತಿ, ಜೋಧಪುರ, ಅಜ್ಮೀರ, ಗಾಂಧಿಧಾಮ ರೈಲುಗಳಿಗೂ ಆದ್ಯತೆಯ ಮೇರೆಗೆ ನಿಲುಗಡೆ ನೀಡಲು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪಪಂ ಮಾಜಿ ಅಧ್ಯಕ್ಷ ಅಮೋಲ ಗುಂಜೀಕರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ರೈಲು ನಿಲ್ದಾಣ ಸಲಹಾ ಸಮಿತಿ ಸದಸ್ಯ ಪ್ರವೀಣ ಪವಾರ, ಬಾಬು ಸುಣಗಾರ ಇನ್ನೀತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರೈ ಘಟಕಕ್ಕಾಗಿ ಮಂಡ್ಯದಲ್ಲೇ 100 ಎಕ್ರೆ ಕೊಡಿ: ಎಚ್‌ಡಿಕೆ ಪತ್ರ
ಭರ್ಜರಿ ಯಶಸ್ಸು ಕಂಡ ಕೆಪೆಕ್‌ ವಾಣಿಜ್ಯ ಮೇಳ