ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಮಳೆಯ ಅಭಾವದಿಂದ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭೀಕರ ಬರಗಾಲ ಎದುರಾಗಿದೆ. ನೀರಿಲ್ಲದೇ ಜನ-ಜಾನುವಾರುಗಳು ತತ್ತರಿಸಿ ಹೋಗಿವೆ. ಹಳ್ಳ-ಕೊಳ್ಳಗಳು, ತೆರೆದ ಬಾವಿಗಳು ಸೇರಿ ಜಲಮೂಲಗಳು ಸಂಪೂರ್ಣ ಬತ್ತಿವೆ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಅಲೆದಾಡುವಂತಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಗ್ರಾಮೀಣ, ನಗರ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಜೂನ್- 2024 ವರೆಗೆ ಕೃಷ್ಣಾ ನದಿಯ ಪಾತ್ರದ ಜನತೆಗೆ ಕನಿಷ್ಠ 4 ಟಿಎಂಸಿ ನೀರಿನ ಅವಶ್ಯಕತೆಯಿದೆ. ಈ ಬಗ್ಗೆ ನೆರೆಯ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದು, ಕನಿಷ್ಠ ನಾಲ್ಕು ಟಿಎಂಸಿ ನೀರು ಬಿಡುವಂತೆ ಮಹಾ ಸರ್ಕಾರಕ್ಕೆ ಪಾವತಿಸಲು ಅನುದಾನ ಬಿಡುಗಡೆ ಮಾಡಲು ಶಾಸಕ ಸವದಿ ಆಗ್ರಹಿಸಿದ್ದಾರೆ.
ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಸಂಜಯ ತೆಗ್ಗಿ, ಬಾಬಾಗೌಡ ಪಾಟೀಲ, ವರ್ಧಮಾನ ಕೋರಿ, ಸುರೇಶ ಅಕ್ಕಿವಾಟ, ಆನಂದ ಕಂಪು ಸೇರಿದಂತೆ ಹಲವು ಮುಖಂಡರು ಇದ್ದರು.