ಕನ್ನಡಪ್ರಭ ವಾರ್ತೆ ಮಂಡ್ಯ
ಗುತ್ತಿಗೆ, ಹೊರಗುತ್ತಿಗೆ, ವಾಹನ ಚಾಲಕರು, ಲೋಡರ್ಸ್ ಮತ್ತು ಕ್ಲೀನರ್ಸ್‌ಗಳಿಗೆ ಗುತ್ತಿಗೆ ಸಂಸ್ಥೆಯ ಮೂಲಕ ವೇತನ ನೀಡುವ ಬದಲು ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ವೇತನ ಪಾವತಿಸುವಂತೆ ಸರ್ಕಾರವನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಪಡಿಸಿದರು.
ಕರ್ನಾಟಕ ರಾಜ್ಯಪತ್ರದ ಅಧಿಸೂಚನೆಯಂತೆ ೨೦೨೨ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಆದೇಶ ಹೊರಡಿಸಿದೆ. ಎರಡನೇ ಹಂತದಲ್ಲಿ ೨೦೨೩ನೇ ಸಾಲಿನಲ್ಲಿ ಪೌರ ಕಾರ್ಮಿಕರನನ್ನು ಕಾಯಂಗೊಳಿಸಲು ಆದೇಶ ಹೊರಡಿಸಿದ್ದರೂ ಸುಮಾರು ೨೦ ವರ್ಷಗಳಿಂದ ಸೇವೆ ಸಲ್ಲಿಸಿದ ಪೌರ ಕಾರ್ಮಿಕರಿಗೆ ಮಾನ್ಯತೆ ಕೊಡದೆ, ಸೇವಾವಧಿಯನ್ನು ಪರಿಗಣಿಸದೆ ಇರುವ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಂಡು ಹೆಚ್ಚುಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದರು.ದಿನಗೂಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಬ್ಯಾಂಕ್ ದಾಖಲೆ, ಇಎಸ್‌ಐ, ಪಿಎಫ್‌ನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸುವುದು. ಆ ಮೂಲಕ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಮೊದಲ ಆದ್ಯತೆ ನೀಡುವಂತೆ ತಿಳಿಸಿದರು.
ಸಾರಿಗೆ ನೌಕರರಿಗೆ ನೀಡಿರುವಂತೆ ನಗದು ರಹಿತ ಆರೋಗ್ಯ ಕಾರ್ಡ್‌ಗಳನ್ನು ನೀಡಬೇಕೆಂಬ ಆಗ್ರಹಕ್ಕೆ ರಾಜ್ಯಸರ್ಕಾರ ಒಪ್ಪಿಗೆ ಸೂಚಿಸಿದೆ. ಸಂಘದ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಬಜೆಟ್‌ನಲ್ಲಿ ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವುದಾಗಿ ಹೇಳಿದರು.
ಚಾಮರಾಜನಗರ, ಗುಂಡ್ಲುಪೇಟೆ, ಚಿಕ್ಕಬಳ್ಳಾಫುರದಲ್ಲಿ ನೀಡಿರುವಂತೆ ೫ ಕಿ.ಮೀ. ವ್ಯಾಪ್ತಿಯಲ್ಲಿ ೩೦*೪೦ ಜಾಗವನ್ನು ಗುರುತಿಸಿ ಪೌರ ಕಾರ್ಮಿಕರಿಗೆ ಮಂಡ್ಯ ನಗರಸಭೆ ವತಿಯಿಂದ ನೀಡುವಂತೆ ಒತ್ತಾಯಿಸಿದರು.