ಅತಿಕ್ರಮಣ ಮನೆಗಳ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ

KannadaprabhaNewsNetwork |  
Published : Sep 11, 2026, 02:15 AM IST
ಶಾಸಕರಾದ ಭೀಮಣ್ಣ ಟಿ. ನಾಯ್ಕ್, ಶಿವರಾಮ ಹೆಬ್ಬಾರ್ ಅವರು ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಗ್ರಾಮೀಣ ಭಾಗದ ಬಡ ಹಾಗೂ ಸಾಮಾನ್ಯ ಜನರು ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳಿಗೆ ನಂಬರ್ ರದ್ದು ಮಾಡುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮೂಲ ಸೌಕರ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ.

ಶಿರಸಿ: ಅತಿಕ್ರಮಣ ಜಾಗದಲ್ಲಿರುವ ಮನೆಗಳ ನಂಬರ್‌ಗಳನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ಗುರುವಾರ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.ಗ್ರಾಮೀಣ ಭಾಗದ ಬಡ ಹಾಗೂ ಸಾಮಾನ್ಯ ಜನರು ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳಿಗೆ ನಂಬರ್ ರದ್ದು ಮಾಡುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮೂಲ ಸೌಕರ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ತಂದಿರುವ ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಶಾಸಕರು ಸಚಿವರಲ್ಲಿ ವಿನಂತಿಸಿಕೊಂಡರು.ಶಾಸಕರ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು, ಮುಂಬರುವ ಶಾಸನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ ಶಾಸಕರ ಸಭೆಯನ್ನು ಕರೆದು, ಈ ವಿಷಯದ ಕುರಿತು ಕೂಲಂಕಷವಾಗಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಆದೇಶವನ್ನು ಹಿಂಪಡೆಯುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಇದ್ದರು.ಡಿಸಿಸಿ ಅಧ್ಯಕ್ಷರಾಗಿ ಜಿ.ಟಿ. ನಾಯ್ಕ ನೇಮಕ

ಕಾರವಾರ: ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ(ಡಿಸಿಸಿ) ಅಧ್ಯಕ್ಷರಾಗಿ ನ್ಯಾಯವಾದಿ ಜಿ.ಟಿ. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕ ಮಹತ್ವ ಪಡೆದಿದೆ. ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನೆಯನ್ನು ಚುರುಕುಗೊಳಿಸುವ ಹೊಣೆಗಾರಿಕೆ ಜಿ.ಟಿ. ನಾಯ್ಕ ಅವರ ಮೇಲಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಸಮರ್ಥವಾಗಿ ಮುನ್ನಡೆಸುವ ಸವಾಲು ಅವರ ಮುಂದಿದೆ. ನೇಮಕಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತ ವ್ಯಕ್ತಪಡಿಸಿದ್ದು, ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಎಸ್‌ನಿಂದ ಹಾವೇರಿ ಜಿಲ್ಲೆ ಬರಗಾಲ ಘೋಷಣೆಗೆ ಒತ್ತಾಯಿಸಿ೨೧ರಂದು ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ, ಬೈಕ್ ರ‍್ಯಾಲಿ
ಶೈಕ್ಷಣಿಕ, ಔದ್ಯೋಗಿಕ ಕ್ರಾಂತಿಯಲ್ಲಿ ಮಹಿಳೆ ಸಹಭಾಗಿತ್ವ ಅತ್ಯುತ್ತಮ ಬೆಳವಣಿಗೆ