ಸಮುದ್ರ ಸುಳಿಗೆ ಸಿಲುಕಿದ ವ್ಯಕ್ತಿ ರಕ್ಷಣೆ

KannadaprabhaNewsNetwork | Published : Oct 16, 2023 1:46 AM

ಸಾರಾಂಶ

ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಪ್ರವಾಸಿಗನನ್ನ ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಭಾನುವಾರ ಬೆಳಗ್ಗೆ ಕುಡ್ಲೆ ಕಡಲತೀರದಲ್ಲಿ ನಡೆದಿದೆ.
ಗೋಕರ್ಣ: ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಪ್ರವಾಸಿಗನನ್ನ ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಭಾನುವಾರ ಬೆಳಗ್ಗೆ ಕುಡ್ಲೆ ಕಡಲತೀರದಲ್ಲಿ ನಡೆದಿದೆ. ಬೆಂಗಳೂರುನಲ್ಲಿ ಖಾಸಗಿ ಉದ್ಯೋಗದಲ್ಲಿರುವ ಕೇರಳ ಮೂಲದ ರಾಜಿಕ ಸಿ . ಪಿ.(೨೬) ಪ್ರಾಣಾಪಾಯದಿಂದ ಪಾರಾಗಿ ಬಂದ ಪ್ರವಾಸಿಗರಾಗಿದ್ದು, ತನ್ನ ಸ್ನೇಹಿತನೊಂದಿಗೆ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದು, ಸಮುದ್ರದಲ್ಲಿ ಈಜಾಡಲು ತೆರಳಿದ ವೇಳೆ ಈ ಅವಘಡ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಜೀವರಕ್ಷಕ ಸಿಬ್ಬಂದಿಗಳಾದ ನಾಗೇಂದ್ರ ಎಸ್. ಕುರ್ಲೆ, ಮಂಜುನಾಥ ಸದಾನಂದ ಹೋಸ್ಕಟ್ಟಾರವರು ಪ್ರವಾಸಿಗ ಆಪತ್ತಿನಲ್ಲಿರುವುದನ್ನು ಗಮನಿಸಿದ್ದು ತಕ್ಷಣ ಧಾವಿಸಿ ಸುಳಿಯಿಂದ ಪಾರು ಮಾಡಿ ದಡಕ್ಕೆ ತಂದು ಜೀವ ಉಳಿಸಿದ್ದಾರೆ. ಇವರಗೆ ಪ್ರವಾಸಿ ಮಿತ್ರ ರಘುವೀರ ನಾಯ್ಕ್, ಕರಾವಳಿ ಕಾವಲು ಪಡೆಯ ಕೆ.ಎನ್.ಡಿ ಸಿಬ್ಬಂದಿ ವಿಷ್ಣು ಕುರ್ಲೆ, ಮೈಸ್ಟಿಕ್ ಅಡ್ವೆಂಚರ್‌ನ ಸಿಬ್ಬಂದಿ ಆದಿತ್ಯ ಅಂಕೋಲಾ,ಲೋಹಿತ್, ಸೂರಜ್‌ರವರು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಿದ್ದಾರೆ.

Share this article