ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರ ಪದವಿ ಪ್ರದಾನ ಸಮಾರಂಭ ಮತ್ತು ಸಂಶೋಧನಾ ಕೇಂದ್ರ ಹಾಗೂ ಪಿಎಂ-ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಸಂಶೋಧನಾ ಕೇಂದ್ರಕ್ಕಾಗಿ ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಹೋಗಬೇಕಾದ ಪರಿಸ್ಥಿತಿ ಇತ್ತು. ಆದರೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ವಿದ್ಯಾರ್ಥಿಗಳು ಸ್ಥಳೀಯವಾಗಿಯೇ ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸಂಶೋಧನಾ ಕೇಂದ್ರ ಆರಂಭಿಸಲಾಗಿದೆ. ಕಾಲೇಜಿನಲ್ಲಿ ಈ ಬಾರಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿ ಎಂದರು.ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣ ಜೊತೆಗೆ ಕಂಪ್ಯೂಟರ್ ಶಿಕ್ಷಣ ಕಲಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಪದವಿ, ಹುದ್ದೆ, ಸ್ಥಾನಮಾನ ಪಡೆಯಬಹುದು. ಆದರೆ, ವಿದ್ಯಾರ್ಥಿ ಜೀವನಕ್ಕೆ ಮತ್ತೆ ಮರಳಲು ಸಾಧ್ಯವಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವ ಮೂಲಕ ಉನ್ನತ ಸ್ಥಾನಕ್ಕೆ ಏರಬೇಕು ಎಂದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಮಂಡ್ಯ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ, ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್, ಸ್ನಾತಕೋತ್ತರ ವಿಭಾಗಗಳ ಸಂಯೋಜಕ ಡಾ.ಕೆ.ಸಿದ್ದರಾಜು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಡಿ.ಮಹಾಲಿಂಗಯ್ಯ, ಸದಸ್ಯರಾದ ಜಯಂತಿ ಲಾಲ್ ಪಟೇಲ್, ಬಿಂದುಶ್ರೀ, ದಾಸೇಗೌಡ ಮತ್ತಿತರರು ಇದ್ದರು.