ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಮಾತನಾಡಿದರು.
ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೂಲಕವೇ ಸಮಾಜದ ಪ್ರಗತಿ ಸಾಧ್ಯ. ಬಡವರು, ಶೋಷಿತರು ಹಾಗೂ ಅವಕಾಶ ವಂಚಿತ ಸಮುದಾಯಗಳ ಬದುಕಿನಲ್ಲಿ ಬದಲಾವಣೆ ತರುವುದೇ ಸರ್ಕಾರದ ಆಶಯ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳ ಆಧಾರದ ಮೇಲೆ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ " ಎಂದರು.ಅನೇಕ ಬಡ ರೈತರು ನೇಗಿಲು ಮತ್ತು ಜಾನುವಾರುಗಳಿಲ್ಲದೆ ಕೃಷಿ ಮಾಡುವುದು ಕಷ್ಟವಾಗಿದೆ. ಅಂತಹ ರೈತರಿಗೆ ನೆರವಾಗಲು ಉಚಿತವಾಗಿ ಭೂಮಿಯನ್ನು ಉಳುಮೆ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸುವ ಉದ್ದೇಶದೊಂದಿಗೆ ''''''''ನೇಗಿಲಯೋಗಿ'''''''' ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು
ಬುದ್ಧನ ಚಿಂತನೆಗೆ ಯಾವುದೇ ಗಡಿಯಿಲ್ಲ. ಅವರ ಶಾಂತಿ ಮತ್ತು ಅಹಿಂಸೆಯ ಸಂದೇಶ ಭಾರತಕ್ಕೆ ಮಾತ್ರ ಸೀಮಿತವಾಗದೆ ಏಷ್ಯಾದ ಅನೇಕ ದೇಶಗಳಲ್ಲಿ ಪ್ರಭಾವ ಬೀರಿದೆ. ಕಳೆದ ವರ್ಷ ಬಿಹಾರದ ಗಯಾಕ್ಕೆ ಭೇಟಿ ನೀಡಿ, ಬುದ್ಧನಿಗೆ ಜ್ಞಾನೋದಯವಾದ ಪವಿತ್ರ ಭೂಮಿಯನ್ನು ವೀಕ್ಷಿಸಿ ನಮಸ್ಕರಿಸಿದ್ದೆ ಎಂದು ಸ್ಮರಿಸಿದರು.
ಶಾಸಕ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ನಡೆದ ಈ ಭವ್ಯ ಬೌದ್ಧ ಸಮ್ಮೇಳನವು ಬುದ್ಧನ ಶಾಂತಿ, ಬಸವಣ್ಣನ ಸಮಾನತೆ ಮತ್ತು ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯಗಳನ್ನು ಮತ್ತಷ್ಟು ಬಲಪಡಿಸಲಿ.