ಮೀಸಲಾತಿ ಎಲ್ಲ ಸಮುದಾಯಗಳಿಗೆ ಸಂವಿಧಾನ ನೀಡಿರುವ ಪ್ರಾತಿನಿಧ್ಯತೆ

KannadaprabhaNewsNetwork |  
Published : Mar 22, 2025, 02:00 AM IST
ಪೋಟೋ: 21ಎಸ್‌ಎಂಜಿಕೆಪಿ12ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ  ಶುಕ್ರವಾರ ಏರ್ಪಡಿಸಿದ್ದ  ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮತ್ತು ಸಂಶೋಧನಾ ನೆಲೆಗಳು ಎಂಬ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ. ಎಸ್. ದ್ವಾರಕಾನಾಥ್ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ಮೀಸಲಾತಿ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡುವ ಸವಲತ್ತಲ್ಲ. ಅದು ಸಂವಿಧಾನ ಎಲ್ಲ ಅಲಕ್ಷಿತ ಸಮುದಾಯಗಳಿಗೆ ನೀಡಿರುವ ಪ್ರಾತಿನಿಧ್ಯತೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಅಭಿಪ್ರಾಯಪಟ್ಟರು.

ಶಿವಮೊಗ್ಗ: ಮೀಸಲಾತಿ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡುವ ಸವಲತ್ತಲ್ಲ. ಅದು ಸಂವಿಧಾನ ಎಲ್ಲ ಅಲಕ್ಷಿತ ಸಮುದಾಯಗಳಿಗೆ ನೀಡಿರುವ ಪ್ರಾತಿನಿಧ್ಯತೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮತ್ತು ಸಂಶೋಧನಾ ನೆಲೆಗಳು ಎಂಬ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ದಲಿತರಿಗೆ ಮಾತ್ರ ಮೀಸಲಾತಿಯನ್ನು ಒದಗಿಸಲಿಲ್ಲ. ಜೊತೆಗೆ ಎಲ್ಲ ಅಲಕ್ಷಿತ ಸಮುದಾಯಗಳಿಗೂ ಪ್ರಾತಿನಿಧ್ಯತೆಯ ಅವಕಾಶವನ್ನು ಸಂವಿಧಾನದಲ್ಲಿಯೇ ಕಲ್ಪಿಸಿಕೊಟ್ಟರು. ಅವಕಾಶವಂಚಿತರಿಗೆ ಆಯಾ ಕಾಲಘಟ್ಟದ ಸರ್ಕಾರಗಳು ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಪ್ರಾತಿನಿಧ್ಯತೆ ದೊರಕಿಸಿಕೊಡಲು ತಿದ್ದುಪಡಿಯ ಮಾರ್ಗವನ್ನು ಕೂಡ ಕಲ್ಪಿಸಿಕೊಟ್ಟರು ಎಂದು ತಿಳಿಸಿದರು. ಮೀಸಲಾತಿಯ ಸೌಲಭ್ಯ ಪಡೆದುಕೊಳ್ಳಲು ಬಲಿಷ್ಠ ಸಮುದಾಯಗಳು ಹೋರಾಟ ನಡೆಸುತ್ತಿರುವ ಸಮಕಾಲೀನ ಸಂದರ್ಭದಲ್ಲಿ, ಈ ಸಮುದಾಯಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಬಲವಾಗಿರುವುದನ್ನು ಮರೆಯಬಾರದು. ದಲಿತ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಗೆ ಬಲಿಷ್ಠರು ಕೈ ಹಾಕುವುದು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗುತ್ತದೆ ಎಂದರು. ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಮಾತನಾಡಿ, ನಾವುಗಳು ಅಂಬೇಡ್ಕರ್ ಅವರ ವಿಚಾರಗಳನ್ನು ಮನನ ಮಾಡಿ, ವಿದ್ಯಾರ್ಥಿಗಳ ಮನೋಭೂಮಿಕೆಯಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಬೀಜಗಳನ್ನು ಬಿತ್ತಬೇಕಿದೆ. ಅವರ ಅಧ್ಯಯನಶೀಲತೆ, ಸಾಮಾಜಿಕ ಅಸಮಾನತೆ ನಿವಾರಣೆಗೆ ಅವರು ಕೈಗೊಂಡ ವೈಜ್ಞಾನಿಕ ಪರಿಹಾರಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಿದೆ ಎಂದರು.ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಪ್ರೊ.ಎಚ್.ಎನ್.ರಮೇಶ್, ಪ್ರೊ.ಓಬಳೇಶ್ ಘಟ್ಟಿ, ಡಾ.ಜಗನ್ನಾಥ ಕೆ.ಡಾಂಗೆ, ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್, ಎಂ.ಸಂಪತ್ ಕುಮಾರ್, ಓಬಳೇಶ್ ಟಿ.ಮಂಜುನಾಥಯ್ಯ, ಆರ್.ರವಿಕುಮಾರ್ ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳ ಬಿ.ಇಡಿ.ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರುಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''