ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ಟ್ ವಸತಿ ಶಾಲೆಗಳ ಕಾಯಂ ಶಿಕ್ಷಕರು, ನೌಕರರು ಹಲವು ಸೌಲಭ್ಯಗಳಿಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್‌ಸಿ, ಎಸ್‌ಟಿ., ಬಿ.ಸಿ.ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು, ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದರು.
ಮರಣ ಮತ್ತು ನಿವೃತ್ತ ಉಪಧನ ಸೌಲಭ್ಯ ಒದಗಿಸುವುದು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು, ಹೆಚ್ಚುವರಿ ಕಾರ್ಯಭಾರ ಇರುವುದರಿಂದ ಶೇ.೧೦ರಷ್ಟು ವಿಶೇಷ ಭತ್ಯೆ ಮಂಜೂರಾತಿ ನೀಡುವಂತೆ ಒತ್ತಾಯಿಸಿದರು.ಮೇಲ್ಕಂಡ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮುಖಂಡರಾದ ಪ್ರಸಾದ್, ದೀಪಕ್, ಸಂತೋಷ್‌ಕುಮಾರ್, ನವೀನ್, ಸುರೇಶ್, ಟಿ.ಕೆ.ಸ್ವಾಮಿ, ಅಭಿಲಾಷ್, ಗುರುಮೂರ್ತಿ, ಉಷಾ, ಶಿಲ್ಪಾ, ಭವ್ಯ, ಚೇತನಾ, ಶಕುಂತಲಾ, ಮುನೀರ್‌ಪಾಷ, ಕಾಂತರಾಜು, ಗಿರೀಶ್, ದಸಂಸ ಮುಖಂಡ ವೆಂಕಟಗಿರಿಯಯ್ಯ, ಆನಂದ್ ಇತರರು ಪ್ರತಿಭಟನೆಯಲ್ಲಿ ಹಾಜರಿದ್ದರು.