ವಸತಿ ಶಾಲೆಗಳ ಅವಕಾಶ ವಂಚಿತ ಸಮುದಾಯಗಳ ಮಕ್ಕಳಿಗೆ ಅನುಕೂಲ: ರಾಜಾನಾಯ್ಕ

KannadaprabhaNewsNetwork |  
Published : Feb 16, 2026, 01:45 AM IST
14ಕೆಕೆೆಡಿಯು2 | Kannada Prabha

ಸಾರಾಂಶ

ಕಡೂರುಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ವಸತಿ ಶಾಲೆಗಳಿಂದ ಹೆಚ್ಚಿನ ಅನುಕೂಲವಾಗಿದೆ ಎಂದು ಬೆಸ್ಕಾಂ ನಿವೃತ್ತ ಎಂಜಿನಿಯರ್ ರಾಜಾನಾಯ್ಕ ಹೇಳಿದರು.

ಬೀಳ್ಕೊಡುಗೆ,ಪ್ರತಿಭಾ ಪುರಸ್ಕಾರ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಕಡೂರು

ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ವಸತಿ ಶಾಲೆಗಳಿಂದ ಹೆಚ್ಚಿನ ಅನುಕೂಲವಾಗಿದೆ ಎಂದು ಬೆಸ್ಕಾಂ ನಿವೃತ್ತ ಎಂಜಿನಿಯರ್ ರಾಜಾನಾಯ್ಕ ಹೇಳಿದರು.ಬಿ.ಮಲ್ಲೇನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದ 10 ನೇ ತರಗತಿ ವಿದ್ಯಾರ್ಥಿ ಗಳ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿ ಈ ಹಿಂದೆ ಆರ್ಥಿಕವಾಗಿ ಹಿಂದುಳಿದ ಕೆಳ ಸಮುದಾಯಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಇದನ್ನು ಮನಗಂಡ ರಾಜ್ಯ ಸರ್ಕಾರ 1994 ರಲ್ಲಿ ವಸತಿ ಶಾಲೆ ಆರಂಭಿಸಿದ್ದರಿಂದ ಸಾವಿರಾರು ಮಕ್ಕಳಿಗೆ ವಸತಿ ಸಹಿತ ಉಚಿತ ಶಿಕ್ಷಣ ದೊರೆಯುತ್ತಿದೆ. ವಸತಿ ಶಾಲೆಗಳು ಇಲ್ಲದಿದ್ದರೆ ಅದೆಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು ಎಂಬುದನ್ನು ಊಹಿಸುವುದು ಅಸಾಧ್ಯ ಎಂದರು.

ದೇಶದ ಪ್ರತಿಯೊಬ್ಬ ವ್ಯಕ್ತಿ ಸಾಕ್ಷರನಾಗಬೇಕು ಎಂಬ ಕಾರಣಕ್ಕೆ ಸರ್ಕಾರ ಅನೇಕ ಯೋಜನೆ ಜಾರಿಗೆ ತರುತ್ತಿದೆ. ಆದರೆ ಇಂದಿಗೂ ಸಾಕ್ಷರತೆ ಪ್ರಮಾಣ ಶೇಕಡ ನೂರು ತಲುಪದಿರುವುದು ವಿಪರ್ಯಾಸ ಎಂದರು. ಜೋಡಿ ಹೋಚೀಹಳ್ಳಿ ಮೊರಾರ್ಜಿ ವಸತಿ ಶಾಲೆ ಪ್ರಾಚಾರ್ಯ ಕೆ.ಎಚ್.ಗಿರೀಶ್ ಮಾತನಾಡಿ ,ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದೆ. ಕೊನೆ ಕ್ಷಣದ ತಯಾರಿ ಬಹಳ ಮುಖ್ಯ. ಆದುದರಿಂದ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಮಾರ್ಗದರ್ಶನ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಸಿ.ರಮೇಶ್ ಮಾತನಾಡಿ, ಕಳೆದ ವರ್ಷ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ.ಈ ವರ್ಷ 625 ಕ್ಕೆ 625 ಅಂಕಗಳನ್ನು ಗಳಿಸುವಂತೆ ಮಕ್ಕಳನ್ನು ಉತ್ತೇಜಿಸುವ ನಿಟ್ಟಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಿದೆ.ಎಸ್.ಎಸ್.ಎಲ್.ಸಿ.ನಂತರ ಶಾಲೆಯಿಂದ ಹೊರ ಹೋಗುವ ಮಕ್ಕಳು ಉತ್ತಮ ಭವಿಷ್ಯ ರೂಪಿಸಿ ಕೊಂಡು. ಶಾಲೆಗೆ ಕೀರ್ತಿ ತರಬೇಕು ಎಂದರು. ಇದೇ ಸಂದರ್ಭದಲ್ಲಿ ಕಳೆದ ಬಾರಿ 10 ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪೋಷಕ ಸಮಿತಿ ಸದಸ್ಯರಾದ ಚಟ್ಟನಹಳ್ಳಿ ಚಂದ್ರಪ್ಪ,ಸಿದ್ದಪ್ಪ,ಲೋಕೇಶ್,ಮೀನಾಕ್ಷಮ್ಮ ಮತ್ತಿತರರು ಇದ್ದರು.

14ಕೆಕೆಡಿಯು2.

ಕಡೂರು ತಾಲೂಕಿನ ಬಿ.ಮಲ್ಲೇನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ 10 ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಂಡಸಿಯಲ್ಲಿ ಶಾಸಕ ಶಿವಲಿಂಗೇಗೌಡರ ಹುಟ್ಟುಹಬ್ಬ ಆಚರಣೆ
ರಾಜ್ಯ ಸರ್ಕಾರದ ಲಂಚಗುಳಿತನದಿಂದ ರೈತರ ಬದುಕು ಶೋಷಣೆ: ಗುರುಪ್ರಸಾದ್‌