ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯಅಭಿವೃದ್ಧಿಗೆ ನಿರ್ಣಯ: ಸಿದ್ದರಾಮಯ್ಯ

KannadaprabhaNewsNetwork |  
Published : Apr 25, 2025, 11:47 PM IST
r,5news,3 ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....Hnr,6news,3 ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದರ್ಶನ ಪಡೆದು ಹೊರಬಂದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು... | Kannada Prabha

ಸಾರಾಂಶ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಚಾಮರಾಜನಗರ: ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಮಹದೇಶ್ವರ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ:

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ಗುರುವಾರ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯ ನಿಷೇಧವಾಗಬೇಕು, ದೇವಸ್ಥಾನದಲ್ಲಿ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೆಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ:

ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ. ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ